ಎ.9 ರಂದು ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಿಗೆ ಉಪ ಚುನಾವಣೆ

ಹೊಸದಿಲ್ಲಿ, ಮಾ.9: ಕರ್ನಾಟಕದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಇಂದು ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಎ.9ರಂದು ಉಪಚುನಾವಣೆ ನಡೆಯಲಿದೆ.
ಎ. 13ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
ಮಾ.14ರಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಮಾ.21 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾ.22ರಂದು ನಾಮಪತ್ರದ ಪರಿಶೀಲನೆ ನಡೆಯಲಿದೆ. ಮಾ.24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.
Next Story





