16 ವರ್ಷದ ಬಾಲಕಿ ಮೇಲೆ 4 ತಿಂಗಳಿಂದ ನಿರಂತರವಾಗಿ ಅತ್ಯಾಚಾರ

ಬಾಗೇಪಲ್ಲಿ, ಮಾ.9: ಶಾಲೆ ಬಿಟ್ಟ ಅಪ್ರಾಪ್ತ ಬಾಲಕಿ ಮೇಲೆ ನಿರಂತರವಾಗಿ ಇಬ್ಬರು ಮಧ್ಯವಯಸ್ಕರು ಅತ್ಯಾಚಾರವೆಸಗಿರುವ ಘಟನೆ ಬಾಗೇಪಲ್ಲಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ ಪ್ರತಿನಿತ್ಯವೂ ಕುರಿ ಮತ್ತು ದನ ಮೇಯಿಸಲು ಹೋಗುತ್ತಿದ್ದಳು ಎನ್ನಲಾಗಿದೆ. ಈ ಬಾಲಕಿಯ ಜೊತೆಯಲ್ಲಿ ಸುಮಾರು 55 ಮತ್ತು 50 ವರ್ಷದ ಮಧ್ಯ ವಯಸ್ಸಿನವರು ಸಹ ಕುರಿ ದನಗಳನ್ನು ಮೇಯಿಸಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ವೆಸಗಿದ್ದಾರೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಈ ಬಾಲಕಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ವೈದ್ಯಕೀಯ ತಪಾಸಣೆಗಾಗಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ವೇಳೆಯಲ್ಲಿ ಬಾಲಕಿಯು 4 ತಿಂಗಳ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿರುತ್ತೆ.
ಈ ಸಂಬಂಧ ಬಾಗೇಪಲ್ಲಿ ಪೊಲೀಸರು ಪೋಕ್ಸೋ ಕಾಯ್ದೆ ಆಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
Next Story





