Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 26 ಹೊಸ ಸರಕಾರಿ ಬಸ್ ಮಾರ್ಗಗಳಿಗೆ ಅರ್ಜಿ:...

26 ಹೊಸ ಸರಕಾರಿ ಬಸ್ ಮಾರ್ಗಗಳಿಗೆ ಅರ್ಜಿ: ಸಚಿವ ಪ್ರಮೋದ್

ಉಡುಪಿ- ಕಾರ್ಕಳ ನಾಲ್ಕು ಸರಕಾರಿ ಬಸ್‌ಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 March 2017 7:38 PM IST
share
26 ಹೊಸ ಸರಕಾರಿ ಬಸ್ ಮಾರ್ಗಗಳಿಗೆ ಅರ್ಜಿ: ಸಚಿವ ಪ್ರಮೋದ್

ಉಡುಪಿ, ಮಾ.9: ಉಡುಪಿ ಸುತ್ತಮುತ್ತಲಿನ ಪ್ರದೇಶಗಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಸರಕಾರಿ ಬಸ್‌ಗಳಿಗೆ 26 ಹೊಸ ಮಾರ್ಗಗಳನ್ನು ಗುರು ತಿಸಿ ಆರ್‌ಟಿಎಗೆ ಅರ್ಜಿ ಹಾಕಲಾಗಿದೆ. ಮಾ.21ರಂದು ನಡೆಯುವ ಆರ್‌ಟಿಎ ಸಭೆಯಲ್ಲಿ ಪರವಾನಿಗೆ ಸಿಕ್ಕಿದರೆ ನಗರ ಮತ್ತು ಗ್ರಾಮೀಣ ಪ್ರದೇಶದ ಶೇ.90ರಷ್ಟು ಭಾಗದಲ್ಲಿ ಸರಕಾರಿ ಬಸ್ ಸೇವೆ ದೊರೆಯುವಂತಾ ಗುತ್ತದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿ-ಕಾರ್ಕಳ ಮಾರ್ಗದಲ್ಲಿ ಆರಂಭಗೊಂಡಿರುವ ನಾಲ್ಕು ನೂತನ ಕೆಎಸ್‌ಆರ್‌ಟಿಸಿ ಸಾಮಾನ್ಯ ಸಾರಿಗೆ ಬಸ್‌ಗಳಿಗೆ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಚಾಲನೆ ನೀಡಿ ಅವರು ಮಾತನಾಡುತಿದ್ದರು. ಉಡುಪಿ ನಗರದಲ್ಲಿ ಈಗಾಗಲೇ 12 ನರ್ಮ್ ಬಸ್‌ಗಳು ಸಂಚರಿಸುತ್ತಿದ್ದು, ಇನ್ನು 18 ಬಸ್‌ಗಳನ್ನು ಆರಂಭಿಸಲಾಗುವುದು ಎಂದರು.

ಉಡುಪಿ ಸಿಟಿಬಸ್ ನಿಲ್ದಾಣದ ಬಳಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನರ್ಮ್ ಬಸ್ ನಿಲ್ದಾಣವು ಇದೀಗ ಟೆಂಡರ್ ಹಂತದಲ್ಲಿದೆ. ಅದೇ ರೀತಿ ಬನ್ನಂಜೆಯಲ್ಲಿ ಪಬ್ಲಿಕ್ ಪ್ರೈವೇಟ್ ಪಾಟ್ನರ್ಶಿಪ್ (ಪಿಪಿಪಿ) ಮಾದರಿಯಲ್ಲಿ ಸುಮಾರು 10ಕೋಟಿ ರೂ. ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದು ಅವರು ಹೇಳಿದರು.

ಕಾರ್ಕಳ ಉಡುಪಿ ಮಾರ್ಗವಾಗಿ ನಾಲ್ಕು ಲೋ ಫ್ಲೋರ್ ಮಿಡಿ ಬಸ್ ಗಳನ್ನು ಆರಂಭಿಸಲಾಗಿದ್ದು, ಮುಂದೆ ಇನ್ನು ನಾಲ್ಕು ಬಸ್‌ಗಳನ್ನು ಆರಂಭಿಸ ಲಾಗುವುದು. ನಮ್ಮ ಉದ್ದೇಶ ಖಾಸಗಿ ಬಸ್ ಬೆಳೆಯಬೇಕು ಹಾಗೂ ಸರಕಾರಿ ಬಸ್ ಕೂಡ ಮುಂದುವರೆಯಬೇಕು ಎಂಬುದು. ಇವು ಎರಡೂ ಇದ್ದರೆ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ಆಯುಕ್ತ ವಿವೇಕಾನಂದ ಹೆಗ್ಡೆ, ವಿಭಾಗೀಯ ಸಂಚಾರಿ ಅಧೀಕ್ಷಕ ಜೈಶಾಂತ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ತಹಶೀಲ್ದಾರ್ ಮಹೇಶ್ಚಂದ್ರ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಜನಾರ್ದನ ಭಂಡಾರ್ಕರ್, ಸೆಲಿನಾ ಕರ್ಕಡ ಮೊದ ಲಾದವರು ಉಪಸ್ಥಿತರಿದ್ದರು.

ಬಸ್ ವೇಳಾಪಟ್ಟಿ: 
ಉಡುಪಿ -ಕಾರ್ಕಳ: ಬೆಳಗ್ಗೆ 6:10, 6:40, 7:50, 8:30, 9:30, 9:40, 11:10, ಮಧ್ಯಾಹ್ನ 12:00, 12:40, 12:50, 2:15, 2:25, ಸಂಜೆ 4:05, 4:25ಗಂಟೆ.
ಕಾರ್ಕಳ- ಉಡುಪಿ: ಬೆಳಗ್ಗೆ 6:10, 6:55, 7:55, 8:10, 9:25, 10:25, 11:05, 11:15, ಮಧ್ಯಾಹ್ನ 12:40, 1:40, 2:15, 2:25, ಸಂಜೆ 4:10, 5:15ಗಂಟೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X