ಅಡುಗೆ ಅನಿಲ ದರ ಏರಿಕೆ ಖಂಡಿಸಿ ಜೆಡಿಎಸ್ ಧರಣಿ

ಮಂಗಳೂರು, ಮಾ.9: ಕೇಂದ್ರ ಸರಕಾರವು ಅಡುಗೆ ಅನಿಲ ದರವನ್ನು ಏರಿಸಿರುವುದನ್ನು ಖಂಡಿಸಿ ದ.ಕ.ಜಿಲ್ಲಾ ಜಾತ್ಯತೀತ ಜನತಾ ದಳ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿತು.
ಉತ್ತಮ ಆಡಳಿತ ನೀಡುವುದಾಗಿ ಹೇಳಿ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಇದೀಗ ಅಡುಗೆ ಅನಿಲ ಸಹಿತ ದಿನಬಳಕೆಯ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿ ಜನರನ್ನು ವಂಚಿಸುತ್ತಿವೆ. ಇದನ್ನು ಅರ್ಥಮಾಡಿಕೊಂಡು ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ಹೇಳಿದರು.
ಈ ಸಂದರ್ಭ ಪಕ್ಷದ ಮುಖಂಡರಾದ ವಸಂತ ಪೂಜಾರಿ, ರಾಮ್‌ಗಣೇಶ್, ಅಕ್ಷಿತ್ ಸುವರ್ಣ, ಶ್ರೀನಾಥ್ ರೈ ಮತ್ತಿತರರು ಪಾಲ್ಗೊಂಡಿದ್ದರು.
Next Story





