ಶಿರಾಡಿ ಗ್ರಾಮಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ
ಮನೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಅಡ್ಡಿ: ಆರೋಪ

ಬೆಳ್ತಂಗಡಿ, ಮಾ.10: ಹಕ್ಕುಪತ್ರ ಇದ್ದರೂ ಮನೆ ಕಟ್ಟಲು ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿ ವೃದ್ಧೆಯೊಬ್ಬರು ಗ್ರಾಮಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿರಾಡಿ ಗ್ರಾಮ ಪಂಚಾಯತ್‌ನ ಗ್ರಾಮಸಭೆಯಲ್ಲಿ ಶುಕ್ರವಾರ ನಡೆದಿದೆ.
ಶಿರಾಡಿ ಉದನೆಯ ಕಮಲಾ(70) ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಇವರಿಗೆ ಜಮೀನಿಗೆ ಸಂಬಂಧಿಸಿ ಹಕ್ಕುಪತ್ರ ಇದೆ. ಆದರೆ ಮನೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ದೂರಿದ ಅವರು ಗ್ರಾಮಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅಲ್ಲಿದ್ದವರು ಅವರನ್ನು ತಡೆದರು.
ಸಭೆಯಲ್ಲಿ ಇಷ್ಟೆಲ್ಲ ಗೊಂದಲ ಸಂಭವಿಸಿದರೂ ಸ್ಥಳಕ್ಕೆ ಅರಣ್ಯ ಇಲಾಖೆಯವರಾಗಲಿ, ಪೊಲೀಸ್ ಅಧಿಕಾರಿಗಳಾಗಲಿ ಭೇಟಿ ನೀಡಿಲ್ಲ ಎಂದು ಹೇಳಲಾಗಿದೆ.
Next Story





