Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭವಿಷ್ಯದ ಪ್ರಗತಿಗೆ ಇತಿಹಾಸದ ಜ್ಞಾನ...

ಭವಿಷ್ಯದ ಪ್ರಗತಿಗೆ ಇತಿಹಾಸದ ಜ್ಞಾನ ಅಗತ್ಯ: ಸಚಿವ ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ10 March 2017 7:34 PM IST
share
ಭವಿಷ್ಯದ ಪ್ರಗತಿಗೆ ಇತಿಹಾಸದ ಜ್ಞಾನ ಅಗತ್ಯ: ಸಚಿವ ಪ್ರಮೋದ್

ಉಡುಪಿ, ಮಾ.10: ಪ್ರಸ್ತುತ ಭಾರತ ದೇಶವು ಅಭಿವೃದ್ದಿಯ ದೃಷ್ಠಿಯಿಂದ ಇಡೀ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದ್ದು, ದೇಶವು ಒಂದನೆ ಸ್ಥಾನಕ್ಕೆ ಏರಬೇಕಾದರೆ ಅಭಿವೃದ್ದಿ ಕಾರ್ಯಗಳಲ್ಲಿ ದಲಿತರು ಸೇರಿದಂತೆ ಎಲ್ಲಾ ವರ್ಗ ದವರ ಜೊತೆಯಲ್ಲಿ ಸಾಗಬೇಕಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವ ಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಶುಕ್ರವಾರ ಉಡುಪಿ ಪೂರ್ಣಪ್ರಜ್ಞ ಆಡಿಟೋರಿಯಂ ಬಳಿಯ ವಿಭುದೇಶ ತೀರ್ಥ ಸಭಾಂಗಣದಲ್ಲಿ ನಡೆದ ದಲಿತ ವಚನಕಾರರ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

 ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.25ರಷ್ಟು ದಲಿತರಿದ್ದಾರೆ. ದೇಶದ ಶೇ.25ರಷ್ಟು ಬಡವರಲ್ಲಿ ಶೇ.50ಕ್ಕೂ ಅಧಿಕ ದಲಿತರಿದ್ದಾರೆ. ದಲಿತರ ನೈಜ ಪರಿಸ್ಥಿತಿ ಅರಿಯಬೇಕಾದರೆ ದಲಿತ ಕಾಲೋನಿಗೆ ಭೇಟಿ ನೀಡಬೇಕಾಗಿದೆ. ಮೀಸಲಾತಿ ನೀಡಿ 70ವರ್ಷದ ನಂತರವೂ ಅವರ ಸ್ಥಿತಿ ಕೆಟ್ಟದಾಗಿದೆ ಎಂದು ಅವರು ತಿಳಿಸಿದರು.

 ಹಿಂದಿನ ಇತಿಹಾಸವನ್ನು ಅರಿಯದೇ ಭವಿಷ್ಯದ ಅಭಿವೃದ್ಧಿ ಸಾಧ್ಯವಿಲ್ಲ. 12ನೆ ಶತಮಾನದಲ್ಲಿ ದಲಿತರು ಹಾಗೂ ಶೂದ್ರರ ಮೇಲಿನ ಶೋಷಣೆಯನ್ನು 21ನೆ ಶತಮಾನದಲ್ಲಿರುವ ನಾವು ಮರೆಯಬಾರದು. ದಲಿತ ವಚನಕಾರರು ನೀಡಿದ ಸಂದೇಶಗಳು ಸಮಾಜಕ್ಕೆ ಮಾದರಿಯಾಗಿವೆ. ವಚನಕಾರರ ನೇರ, ನಿಷ್ಠುರ ವಚನಗಳು ಸಮಾಜದ ಪರಿವರ್ತನೆಗೆ ಕಾರಣವಾಗಿವೆ ಎಂದರು.

ದಲಿತ ವಚನಕಾರರ ಕುರಿತು ವಿಶೇಷ ಉಪನ್ಯಾಸ ನೀಡಿದ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕ ಡಾ.ಶ್ರೀಕಾಂತ ಸಿದ್ದಾಪುರ, ದಲಿತ ವಚನಕಾರರು ಇತರೆ ವರ್ಗದವರು ತಮಗೆ ವಿಧಿಸಿದ್ದ ಧಾರ್ಮಿಕ ಮತ್ತು ಸಾಮಾಜಿಕ ಕಟ್ಟು ಪಾಡುಗಳಿಂದ ಹೊರಬರಲು, ತಮ್ಮಲ್ಲಿನ ನಿಷ್ಠೆ, ಸ್ವಾಭಿಮಾನ, ಕಾಯಕ ನಿಷ್ಠೆಯ ಮೂಲಕ ಮೇಲ್ವರ್ಗದ ಆರಾಧ್ಯ ದೈವ ಶಿವನನ್ನೇ ಒಲಿಸಿಕೊಂಡರು. ಆ ಮೂಲಕ ಸಮಾಜದ ಕಣ್ಣು ತೆರೆಸಿದರು. ದಲಿತರಲ್ಲಿ ಆತ್ಮವಿಶ್ವಾಸ ಮೂಡಿಸಿ, ಸಮಾನತೆಯ ಸಂದೇಶ ಸಾರಿದರು ಎಂದು ತಿಳಿಸಿದರು.

ಈ ಪ್ರಯುಕ್ತ ಏರ್ಪಡಿಸಲಾಗಿದ್ದ ವಚನಗಾಯನ ಸ್ಪರ್ಧೆಯಲ್ಲಿ ವಿಜೇತ ರಾದವರಿಗೆ ಬಹುಮಾನ ವಿತರಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ಱನಮ್ಮ ಹೆಮ್ಮೆಯ ವಚನಕಾರರುೞ ಕುರಿತ ಕರಪತ್ರಗಳ ವಿತರಣೆ ನಡೆಯಿತು.

ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಆಹಾರ ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಯೋಗೇಶ್ವರ್ ಉಪಸ್ಥಿತರಿದ್ದರು.

ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು. ಉಪನ್ಯಾಸಕ ಅಶ್ವಥ್ ಭಾರದ್ವಾಜ್ ಕಾರ್ಯಕ್ರಮ ನಿರೂಪಿಸಿದರು. ಯಶ ವಂತ ಎಂ.ಜಿ. ಇವರಿಂದ ವಚನಗಾಯನ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X