ಪುತ್ತೂರು ನಗರಸಭಾ ಡಂಪಿಂಗ್ ಯಾರ್ಡ್‌ಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಪುತ್ತೂರು, ಮಾ.10: ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರಿನಲ್ಲಿರುವ ಡಂಪಿಂಗ್ ಯಾರ್ಡ್‌ಗೆ ಶುಕ್ರವಾರ ಜಿಲ್ಲಾಧಿಕಾರಿ ಜಗದೀಶ್ ಅವರು ಶುಕ್ರವಾರ ಭೇಟಿ ನೀಡಿ ಬೆಂಕಿ ಅನಾಹುತದ ಬಗ್ಗೆ ಪರಿಶೀಲನೆ ನಡೆಸಿದರು.
ನಗರಸಭೆಯ ಉಪಾಧ್ಯಕ್ಷ ವಿಶ್ವನಾಥ ಗೌಡ,ಸದಸ್ಯ ರಾಮಣ್ಣ ಗೌಡ ಹಲಂಗ ,ಸ್ಥಳೀಯ ಪ್ರಮುಖರಾದ ರಾಮಚಂದ್ರ ನೆಕ್ಕಿಲು ಹಾಗೂ ಅಲ್ಲಿ ಸೇರಿದ್ದ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು ತ್ಯಾಜ್ಯ ತಂದು ರಾಶಿ ಹಾಕಿದ ಕೂಡಲೇ ಅದರ ಮೇಲೆ ಮಣ್ಣು ಹಾಕಬೇಕು. ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಿ ತ್ಯಾಜ್ಯ ಸಂಗ್ರಹಿಸಬೇಕು. ಹಸಿ ತ್ಯಾಜ್ಯದ ನಿರ್ವಹಣಾ ವೆಚ್ಚವನ್ನು ಹೆಚ್ಚಳ ಮಾಡಿ ತ್ಯಾಜ್ಯ ಉತ್ಪಾದಕರಿಂದ ಸಂಗ್ರಹಿಸಬೇಕು ಎಂದು ನಗರಸಭೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಪ್ರಭಾರ ಉಪವಿಭಾಗಾಧಿಕಾರಿ ಗಾರ್ಗಿ ಜೈನ್, ನಗರಸಭೆಯ ಆಯುಕ್ತೆ ರೂಪಾ ಶೆಟ್ಟಿ, ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಅವರೊಂದಿಗಿದ್ದರು.
Next Story





