ಎರಡೂ ಕ್ಷೇತ್ರಗಳಲ್ಲಿ ಸೋತ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್

ಡೆಹ್ರಾಡೂನ್, ಮಾ.11: ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿ ತೀವ್ರ ಮುಖಭಂಗ ಅನುಭವಿಸಿದರು.
ಆಡಳಿತಾರೂಢ ಕಾಂಗ್ರೆಸ್ ಮುಖ್ಯಮಂತ್ರಿ ರಾವತ್ ಕಿಚ್ಚಾ ಹಾಗೂ ಹರಿದ್ವಾರ (ಗ್ರಾಮೀಣ) ಕ್ಷೇತ್ರಗಳಲ್ಲಿ ಸೋತಿದ್ದಾರೆ.
ಜ.26 ರಂದು ಕಿಚ್ಚಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ರಾವತ್ ಭಾರೀ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ,ಈ ಕ್ಷೇತ್ರದಲ್ಲಿ ಕೇವಲ 92 ಮತಗಳ ಅಂತರದಿಂದ ಸೋತಿದ್ದಾರೆ.
2009ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಹರಿದ್ವಾರ(ಗ್ರಾಮೀಣ) ಕ್ಷೇತ್ರದಿಂದಲೂ ರಾವತ್ ಸೋಲನುಭವಿಸಿದ್ದಾರೆ. ಹರಿದ್ವಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯತೀಶ್ವರಾನಂದ ವಿರುದ್ಧ 12,000 ಮತಗಳ ಅಂತರದಿಂದ ಹೀನಾಯವಾಗಿ ಸೋತಿದ್ದಾರೆ.
ರಾವತ್ ಉತ್ತರಾಖಂಡದ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿರುವ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.
Next Story