ಸುತ್ತೂರು ಮಠಾಧೀಶರನ್ನು ಭೇಟಿಯಾದ ಸಿದ್ದರಾಮಯ್ಯ

ಮೈಸೂರು, ಮಾ.12: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶಾಖಾ ಮಠದಲ್ಲಿ ಸ್ವಾಮೀಜಿಯವರನ್ನು ಮುಖ್ಯಮಂತ್ರಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಬಸವರಾಜ ರಾಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಉಪಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಈ ಹಠಾತ್ ಭೇಟಿ ಕುತೂಹಲಕ್ಕೆ ಮೂಲವಾಗಿದೆ.
Next Story





