ಉಡುಪಿ: ಹರಿಕೃಷ್ಣ ಪುನರೂರು ಕುರಿತ ಕೃತಿ ಲೋಕಾಪರ್ಣೆ

ಉಡುಪಿ, ಮಾ.12: ಬೆಂಗಳೂರು ಅಗೋಚರ ಪತ್ರಿಕೆಯ ಆಶ್ರಯದಲ್ಲಿ ರೋಹಿತ್ ಪ್ರಕಾಶನ ಸಂಪಾದಿಸಿರುವ 'ಕರಾವಳಿ ಮಾಧ್ಯಮದಲ್ಲಿ ಧರ್ಮ ದರ್ಶಿ ಹರಿಕೃಷ್ಣ ಪುನರೂರು' ತೃತೀಯ ಸಂಪುಟ ಕೃತಿಯ ಲೋಕಾರ್ಪಣೆ ರವಿವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.
ಪರ್ಯಾಯ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಕೃತಿ ಬಿಡುಗಡೆ ಮಾಡಿದರು. ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಟೀಲು ದೇಗುಲದ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣ ಅಸ್ರಣ್ಣ, ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಾಜಿ ಅಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ, ಉದ್ಯಮಿ ಗುರ್ಮೆ ಸುರೇಶ ಶೆಟ್ಟಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ ಮೊದಲಾದವರು ಉಪಸ್ಥಿತರಿದ್ದರು.
ಅಗೋಚಕರ ಸಂಪಾದಕ ನಾಗೇಶ್ ಚಡಗ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮರವಂತೆ ನಾಗರಾಜ್ ಹೆಬ್ಬಾರ್ ಕೃತಿಯ ಕುರಿತು ಮಾತನಾ ಡಿದರು. ಪತ್ರಕರ್ತ ಪುಂಡಲೀಕ ಮರಾಠೆ ಕಾರ್ಯಕ್ರಮ ನಿರೂಪಿಸಿದರು.
Next Story





