Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಚರಾಜ್ಯಗಳ ಚುನಾವಣೆ ಫಲಿತಾಂಶ:...

ಪಂಚರಾಜ್ಯಗಳ ಚುನಾವಣೆ ಫಲಿತಾಂಶ: ರಾಜ್ಯಸಭೆಯಲ್ಲೂ ಬಿಜೆಪಿ ಬಲವರ್ಧನೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ13 March 2017 7:05 PM IST
share
ಪಂಚರಾಜ್ಯಗಳ ಚುನಾವಣೆ ಫಲಿತಾಂಶ: ರಾಜ್ಯಸಭೆಯಲ್ಲೂ ಬಿಜೆಪಿ ಬಲವರ್ಧನೆಗೆ ಅವಕಾಶ

ಹೊಸದಿಲ್ಲಿ, ಮಾ.13: ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬೀಸಿದ ಬಿಜೆಪಿ ‘ಸುನಾಮಿ’ಯಿಂದ ರಾಜ್ಯ ವಿಧಾನಸಭೆಯಲ್ಲಿ ಪಕ್ಷದ ಸದಸ್ಯರ ಸಂಖ್ಯೆ ಗಮನಾರ್ಹವಾಗಿ ಏರಿದ ಜೊತೆಗೇ , ಜುಲೈಯಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆಯಾಗುವ ಸಾಧ್ಯತೆಯ ಮೇಲೂ ಪರಿಣಾಮ ಬೀರಿದೆ. ಅಲ್ಲದೆ ಇದೀಗ ಬಹುಮತದ ಕೊರತೆ ಇರುವ ರಾಜ್ಯಸಭೆಯಲ್ಲೂ ತನ್ನ ಶಕ್ತಿಯನ್ನು ಗಮನಾರ್ಹವಾಗಿ ವೃದ್ಧಿಸಿಕೊಳ್ಳುವ ಅವಕಾಶವನ್ನು ನೀಡಿದೆ.

ಉತ್ತರಪ್ರದೇಶದಲ್ಲಿ 325, ಉತ್ತರಾಖಂಡದಲ್ಲಿ 57 ಮತ್ತು ಮಣಿಪುರದಲ್ಲಿ 21 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಕಾರಣ ಎನ್‌ಡಿಎ ಕೂಟದ ಅಭ್ಯರ್ಥಿಗೆ ರಾಷ್ಟ್ರಪತಿ ಭವನದ ದಾರಿ ಇನ್ನಷ್ಟು ಸುಲಭವಾಗಿದೆ .

ರಾಷ್ಟ್ರಪತಿಯನ್ನು ಆಯ್ಕೆ ಮಾಡುವ ಮತದಾರರ ಗುಂಪಿನಲ್ಲಿ 776 ಸಂಸದರು ಮತ್ತು 4,120 ಶಾಸಕರು ಇರುತ್ತಾರೆ. ಮತದಾರರ ಗುಂಪಿನ ಮತದ ಒಟ್ಟು ವೌಲ್ಯ 10,98,882 ಮತಗಳು . 5,49,442 ಮತಗಳನ್ನು ಅರ್ಧಾಂಶ ಪಾಲು ಎಂದು ವಿಂಗಡಿಸಲಾಗಿದ್ದು ರಾಷ್ಟ್ರಪತಿ ಆಯ್ಕೆಗೆ ಇಷ್ಟು ಮತಗಳ ಅಗತ್ಯವಿದೆ. ಎನ್‌ಡಿಎಗೆ ಈಗ ಕೇವಲ 25 ಸಾವಿರ ಮತಗಳ ಕೊರತೆಯಿದೆ. ಬಿಜು ಜನತಾದಳ, ಎಐಎಡಿಎಂಕೆ ಇತ್ಯಾದಿ ಮಿತ್ರಪಕ್ಷಗಳ ನೆರವಿನಿಂದ ಈ ಕೊರತೆಯನ್ನು ಸುಲಭದಲ್ಲಿ ಸರಿದೂಗಿಸುವ ವಿಶ್ವಾಸದಲ್ಲಿ ಎನ್‌ಡಿಎ ಕೂಟವಿದೆ.

ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತದ ಕೊರತೆಯಿದೆ. 2018ರ ಆಗಸ್ಟ್‌ನಲ್ಲಿ ಮಾಯಾವತಿ ಸೇರಿದಂತೆ ಉತ್ತರಪ್ರದೇಶದ 10 ಸದಸ್ಯರು ರಾಜ್ಯಸಭೆಯಿಂದ ನಿವೃತ್ತರಾಗಲಿದ್ದಾರೆ. ಉತ್ತರಪ್ರದೇಶ ವಿಧಾನಸಭೆಯಲ್ಲಿ ಕೇವಲ 19 ಶಾಸಕರನ್ನು ಹೊಂದಿರುವ ಬಿಎಸ್ಪಿಗೆ, ತನ್ನ ನಾಯಕಿ ಮಾಯಾವತಿಯನ್ನು ಮತ್ತೊಮ್ಮೆ ರಾಜ್ಯಸಭೆಗೆ ಆಯ್ಕೆ ಮಾಡುವುದು ಕಠಿಣವಾಗಲಿದೆ. ಮತ್ತೊಂದೆಡೆ, ಇದರಲ್ಲಿ ಹೆಚ್ಚಿನ ಸ್ಥಾನ ತನ್ನ ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸುಲಭದ ಅವಕಾಶವಿದೆ. ಒಟ್ಟಾರೆಯಾಗಿ ಮುಂದಿನ ವರ್ಷದ ಆಗಸ್ಟ್ ವೇಳೆಗೆ 58 ಸದಸ್ಯರು ನಿವೃತ್ತರಾಗಲಿದ್ದು , ಬಿಜೆಪಿಯು ಇದರಲ್ಲಿ ಕನಿಷ್ಠ ಅರ್ಧಾಂಶದಷ್ಟು ಸ್ಥಾನಗಳನ್ನು ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.

 ಅದಾಗ್ಯೂ, ಕಾಂಗ್ರೆಸ್ ಈ ಬೆಳವಣಿಗೆಯ ಕುರಿತು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಈ ಸಂಖ್ಯೆ ಅವರಲ್ಲಿ ವಿಶ್ವಾಸವನ್ನು ಹುಟ್ಟಿಸಬಹುದು. ಸಾಮಾನ್ಯ ಚುನಾವಣೆಯಲ್ಲಿ ಜನರ ಸಮಸ್ಯೆಗಳನ್ನು ಮುಂದಿಟ್ಟು ಗೆಲ್ಲಬಹುದು. ರಾಷ್ಟ್ರಪತಿ ಚುನಾವಣೆಯ ವಿಷಯ ಹಾಗಲ್ಲ ಎನ್ನುತ್ತಾರೆ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಸಿ.ಚಾಕೊ.

 ಮೋದಿ ಸರಕಾರದ ಭೂಸ್ವಾಧೀನ ಮಸೂದೆ ಅಥವಾ ಮಧ್ಯಾಹ್ನದ ಬಿಸಿಯೂಟಕ್ಕೆ ಆಧಾರ್ ಕಡ್ಡಾಯಗೊಳಿಸುವ ಯೋಜನೆ- ಇವೆಲ್ಲದಕ್ಕೆ ಕಾಂಗ್ರೆಸ್ ಪಕ್ಷದ ಒತ್ತಡವೇ ಕಾರಣ ಎಂದ ಚಾಕೊ, ಅಗತ್ಯವಿದ್ದೆಡೆ ಸರಕಾರವನ್ನು ವಿರೋಧಿಸುವ ಕಾರ್ಯ ಮುಂದುವರಿಸುತ್ತೇವೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X