Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರಹರ ಅನ್ನದಾತ, ಘರ್ ಘರ್ ಅನ್ನದಾತ ಎಂದಾಗ...

ಹರಹರ ಅನ್ನದಾತ, ಘರ್ ಘರ್ ಅನ್ನದಾತ ಎಂದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಚಂಗಪ್ಪ

ರೈತರ ಜಾಥಾ ಮತ್ತು ಹಕ್ಕೊತ್ತಾಯ ಚಳವಳಿ

ವಾರ್ತಾಭಾರತಿವಾರ್ತಾಭಾರತಿ13 March 2017 8:01 PM IST
share
ಹರಹರ ಅನ್ನದಾತ, ಘರ್ ಘರ್ ಅನ್ನದಾತ ಎಂದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಚಂಗಪ್ಪ

ಪುತ್ತೂರು, ಮಾ.13: ಅನ್ಯಾಯ ಅಕ್ರಮಗಳು ನಡೆದಾಗ ಸಿಟ್ಟು ಬರುವುದು ಮಾನವ ಸಹಜಗುಣ. ಸಿಟ್ಟು ಬಾರದಿದ್ದಲ್ಲಿ ಬದಲಾವಣೆ ಆಗಲು ಸಾಧ್ಯವಿಲ್ಲ. ಬದಲಾವಣೆಯ ನಿಟ್ಟಿನಲ್ಲಿ ಸಿಟ್ಟು ಅನಿವಾರ್ಯವಾಗಿದೆ ಎಂದು ರಾಜ್ಯ ರೈತಸಂಘ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಅವರು ಸೋಮವಾರ ರಾಜ್ಯ ರೈತ ಸಂಘ ಹಸಿರು ಸೇನೆಯ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ  ನಡೆದ ರೈತರ ಜಾಥಾ ಮತ್ತು ಹಕ್ಕೊತ್ತಾಯ ಚಳವಳಿಯ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಪ್ರತಿ 45 ನಿಮಿಷಕ್ಕೆ ಓರ್ವ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಪಕ್ಷಕ್ಕೆ ಉತ್ತರ ಪ್ರದೇಶದಲ್ಲಿ ಅಧಿಕಾರ ಬಂದಿದೆ ಎಂದು ದೆಹಲಿಯಲ್ಲಿ ವಿಜಯೋತ್ಸವ ಆಚರಿಸುತ್ತಿರುವ ಕೇಂದ್ರ ಸರಕಾರದವರಿಗೆ ರೈತರ ಆತ್ಮಹತ್ಯೆಗಳು ಕಣ್ಣಿಗೆ ಕಾಣುತ್ತಿಲ್ಲ. ಜನಸೇವೆಗಾಗಿ ನಮಗೆ ಅವಕಾಶ ಸಿಕ್ಕಿದೆ ಎನ್ನುತ್ತಿರುವ ಇವರಿಗೆ ಸೇವೆಯ ಅರ್ಥವೇ ಗೊತ್ತಿಲ್ಲ. ನಮ್ಮ ಎಂಎಲ್‌ಎ, ಎಂಪಿ, ಮುಖ್ಯಮಂತ್ರಿ , ಪ್ರಧಾನ ಮಂತ್ರಿಗಳು ಹಾಗೂ ಅಧಿಕಾರಿಗಳು ಮಾಡುತ್ತಿರುವುದು ಸೇವೆಯಲ್ಲ. ತೆರಿಗೆ ಹಣದಲ್ಲಿ ಸೇವಾ ಶುಲ್ಕ ಪಡೆಯುವವರು ಯಾರೂ ಸೇವಕರಲ್ಲ ಎಂದರು.

ರಾಜ್ಯವನ್ನು ಬರಗಾಲ ಪ್ರದೇಶ ಎಂದು ಘೋಷಿಸಿ:

ಅಳತೆ ಮಾಪನಗಳಿಲ್ಲದೆ ಅಂದಾಜು ಲೆಕ್ಕಾಚಾರದಲ್ಲಿ ಅಧಿಕಾರಿಗಳು ತಯಾರಿಸಿದ ವರದಿಯಂತೆ ರಾಜ್ಯದ ಮುಖ್ಯಮಂತ್ರಿಗಳು ಬರಪೀಡಿತ ಪ್ರದೇಶವನ್ನು ಘೋಷಿಸಿರುವುದು ಮೂರ್ಖತನ ಎಂದ ಅವರು, ಅಧಿಕಾರಿಗಳು ಬರೆದ ವರದಿಯನ್ನು ಮುಖ್ಯಮಂತ್ರಿಗಳು ಸಹಿ ಮಾಡಿ ಪ್ರದಾನಿಯವರಿಗೆ ರವಾನಿಸಿದ್ದಾರೆ. ಈ ವ್ಯವಸ್ಥೆಯೇ ಮೂರ್ಖತನದಿಂದ ಕೂಡಿದೆ. ಈಗಾಗಲೇ ರಾಜ್ಯದ ಎಲ್ಲಾ ಪ್ರದೇಶವೂ ಬರಪೀಡಿತವಾಗಿದ್ದು, ಇಡೀ ರಾಜ್ಯವನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಸಾಲ ಮನ್ನಾ ಮಾಡುವುದು ರೈತರ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ಇದೊಂದು ತುರ್ತು ಸಮಸ್ಯೆ ಪರಿಹಾರ ಎಂದ ಅವರು ಗ್ರಾಮೀಣ ಪ್ರದೇಶದಲ್ಲಿ ಶೇ.45ಕ್ಕಿಂತಲೂ ಅಧಿಕ ಮಂದಿ ರೈತರಿದ್ದು ಈ ತನಕ ರೈತರಿಗೆ ನ್ಯಾಯ ಸಿಕ್ಕಿಲ್ಲ. ಯಾವುದೇ ಸರ್ಕಾರ ರೈತರನ್ನು ನಾಗರಿಕರು ಎಂದು ಪರಿಗಣಿಸಿಲ್ಲ. ರೈತರು ಭದ್ರತೆಯಿಲ್ಲದೆ ಜೀವನ ನಡೆಸುತ್ತಿರುವ ನತದೃಷ್ಟರು. ವಿಧಾನಸಭೆ ಮತ್ತು ಲೋಕಸಭೆಗೆ ಅಯೋಗ್ಯರನ್ನು ಆರಿಸಿ ಕಳಿಸುವ ಕಾರಣ ರೈತರ ಭವಣೆಗಳಿಗೆ ಬೆಲೆಯಿಲ್ಲದಂತಾಗಿದೆ. ಈ ಬಗ್ಗೆ ಇನ್ನಾದರೂ ರೈತರು ಗಂಭೀರ ಚಿಂತನೆ ನಡೆಸಬೇಕು. ರೈತಪರ ಇರುವವರನ್ನು ಆರಿಸುವ ಯೋಚನೆ ಮಾಡಬೇಕು ಎಂದರು.

 ರೈತ ಸಂಘದ ಕಾನೂನು ಸಲಹೆಗಾಗ ಯಸ್.ಪಿ. ಚಂಗಪ್ಪ ಮಾತನಾಡಿ, ರೈತರ ಶವಯಾತ್ರೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಹರಹರ ಮೋದಿ, ಘರ್ ಘರ್ ಮೋದಿ ಎನ್ನುತ್ತಾ ಬಿಜೆಪಿ ವಿಜಯೋತ್ಸವ ಆಚರಣೆಯಲ್ಲಿ ನಿರತವಾಗಿದೆ. ಈ ಘೋಷಣೆ ಹರಹರ ಅನ್ನದಾತ, ಘರ್ ಘರ್ ಅನ್ನದಾತ ಎಂದು ಬದಲಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ರಾಜ್ಯ ಬರಪೀಡಿತವಾಗಿ ತತ್ತರಿಸುತ್ತಿರುವಾಗ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬರಪರಿಹಾರ ಬಿಡುಗಡೆ ಹಣದ ವಿಚಾರದಲ್ಲಿ ಪರಸ್ಪರ ಕೆಸರೆರಚಾಟ ನಡೆಸುತ್ತಿದೆ ಎಂದು ಆರೋಪಿಸಿದರು.

ಸಭೆಯಲ್ಲಿ ಮೂಡಬಿದ್ರೆ ವಲಯ ಅಧ್ಯಕ್ಷ ಧನಕೀರ್ತಿ ಬಲಿಪ, ರಾಜ್ಯ ಕಾರ್ಯದರ್ಶಿ ಸಿ. ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ, ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು, ರೈತ ಮುಖಂಡರಾದ ಸೈಯದ್ ಮೀರಾ ಸಾಹೇಬ್ ಕಡಬ ಮತ್ತಿತರರು ಮಾತನಾಡಿ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು.

ರೈತಮುಖಂಡರಾದ ಈಶ್ವರ ಭಟ್ ಬಡಿಲ, ಧರ್ಣಪ್ಪ ಗೌಡ ಇಡ್ಯಾಡಿ, ಮುರುವ ಮಹಾಬಲ ಭಟ್, ಈಶ್ವರ ಗೌಡ ಆಲಂಕಾರು ಮತ್ತಿತರರು ಉಪಸ್ಥಿತರಿದ್ದರು. ಸುದರ್ಶನ್ ಕಂಪ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X