Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾವಾರಿಧಿ ವಸತಿ ಶಾಲೆ ಮಕ್ಕಳ ಸಾವಿನ...

ವಿದ್ಯಾವಾರಿಧಿ ವಸತಿ ಶಾಲೆ ಮಕ್ಕಳ ಸಾವಿನ ದುರಂತ: ಹತ್ತು ದಿನಗಳೊಳಗಾಗಿ ಪ್ರಯೋಗಾಲಯದ ವರದಿ

ವಾರ್ತಾಭಾರತಿವಾರ್ತಾಭಾರತಿ13 March 2017 10:11 PM IST
share
ವಿದ್ಯಾವಾರಿಧಿ ವಸತಿ ಶಾಲೆ ಮಕ್ಕಳ ಸಾವಿನ ದುರಂತ: ಹತ್ತು ದಿನಗಳೊಳಗಾಗಿ ಪ್ರಯೋಗಾಲಯದ ವರದಿ

ತುಮಕೂರು,ಮಾ.13: ಹುಳಿಯಾರಿನ ವಿದ್ಯಾವಾರಿಧಿ ಇಂಟರ್‌ನ್ಯಾಷನಲ್ ವಸತಿ ಶಾಲೆಯಲ್ಲಿ ಇತ್ತೀಚೆಗೆ ವಿಷ ಮಿಶ್ರಿತವೆನ್ನಲಾದ ಆಹಾರ ಸೇವೆನೆಯಿಂದ ಮೂವರು ಮಕ್ಕಳು ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಅಡಿಗೆ ಕೋಣೆಯಲ್ಲಿದ್ದ ಆಹಾರ ತಯಾರಿಕೆಗೆ ಬಳಸಲಾಗುವ 17 ವಿವಿಧ ಕಚ್ಚಾ ಸಾಮಗ್ರಿಗಳು ಸೇರಿ ವಿವಿಧ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಹತ್ತು ದಿನಗಳೊಳಗಾಗಿ ವರದಿ ಬರಲಿದೆ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್ ರಾಜ್ ತಿಳಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಪ್ರಕರಣ ಕುರಿತಂತೆ ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ವಸತಿ ಶಾಲೆಯ ಅಡಿಗೆ ಕೋಣೆಯಲ್ಲಿ ಮಕ್ಕಳ ಊಟಕ್ಕಾಗಿ ತಯಾರಿಸಿಟ್ಟಿದ್ದ ಅನ್ನ, ಸಾರು, ಮಕ್ಕಳ ವಾಂತಿಯ ಮಾದರಿ ಹಾಗೂ ಶಾಲಾ ಆವರಣದ ಬಳಿಯಿರುವ ದಾಳಿಂಬೆ ಎಲೆಗಳನ್ನು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಸಾರ್ವಜನಿಕ ಆರೋಗ್ಯ ಸಂಸ್ಥೆ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು.

ಕೊರಟಗೆರೆ ತಾಲೂಕು ತೋವಿನಕೆರೆಯ ಭೈರವೇಶ್ವರ ಬೇಕರಿಯಿಂದ ಖರೀದಿಸಲಾದ ಹನಿ ಕೇಕ್ ತಿಂದು ಐವರು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿ, ಗುಣಮಟ್ಟವಿಲ್ಲದ ಬೇಕರಿ ಉತ್ಪನ್ನ ಹಾಗೂ ತಿಂಡಿ-ತಿನಿಸುಗಳನ್ನು ಮಾರಾಟ ಮಾಡುವ ಮಾಲಕರ ವಿರುದ್ಧ ಕೂಡಲೇ ಕ್ರಮ ಜರಗಿಸಬೇಕೆಂದು ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿಗೆ ಸೂಚಿಸಿದರಲ್ಲದೆ, ಅಂಥವರ ಪರವಾನಗಿ ಹಾಗೂ ನೋಂದಣಿಯನ್ನು ರದ್ದುಗೊಳಿಸಬೇಕು. ತಿನಿಸುಗಳು ಅಸುರಕ್ಷಿತವೆಂದು ಪ್ರಯೋಗಾಲಯದಿಂದ ವರದಿ ಬಂದಲ್ಲಿ ಕೂಡಲೇ ಅವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಬೇಕೆಂದು ತಾಕೀತು ಮಾಡಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ವೀರಭದ್ರಯ್ಯ ಮಾತನಾಡಿ, ಮಕ್ಕಳು ತಿಂದ ಆಹಾರದಲ್ಲಿ ತೆಂಗಿನ ಬೆಳೆಯಲ್ಲಿ ಕೀಟ ನಿಯಂತ್ರಣಕ್ಕಾಗಿ ಬಳಸಲಾಗುವ ಅಲ್ಯುಮಿನಿಯಂ ಫಾಸ್ಫೈಡ್ ಎಂಬ ರಾಸಾಯನಿಕ ಮಿಶ್ರಣವಾಗಿರಬಹುದೆಂದು ಶಂಕಿಸಲಾಗಿದೆ ಎಂದರು.

ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ. ಪುರುಷೋತ್ತಮ್ ಮಾತನಾಡಿ, ವಸತಿ ಶಾಲೆಯ ಸ್ಥಳ ಪರಿಶೀಲನೆ ನಡೆಸಿದಾಗ ಅಡಿಗೆ ಕೋಣೆಯಲ್ಲಿ ಸ್ವಚ್ಛತೆ ಇಲ್ಲದಿರುವುದು, ಕಿಟಕಿಯ ಬಾಗಿಲುಗಳು ತೆರೆದಿರುವುದು ಕಂಡುಬಂದಿದೆ. ಈ ಹಿಂದೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪರೀಕ್ಷೆಗಾಗಿ ಜಿಲ್ಲಾ ಸರ್ವೆಲೆನ್ಸ್ ಘಟಕದ ಆರೋಗ್ಯ ಕಾರ್ಯಕರ್ತರು ವಸತಿ ಶಾಲೆಗೆ ಭೇಟಿ ನೀಡಿದಾಗ ಶಾಲೆಯ ಆಡಳಿತ ಮಂಡಳಿಯು ಒಳಗೆ ಪ್ರವೇಶಿಸಲು ಅವಕಾಶ ನೀಡುತ್ತಿರಲಿಲ್ಲವೆಂದು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಷಾಪಂತ್ ಮಾತನಾಡಿ, ವಿಧಿ ವಿಜ್ಞಾನ ಸಂಸ್ಥೆಯಿಂದ ವರದಿ ಬಂದ ಕೂಡಲೇ ತನಿಖೆಯನ್ನು ಚುರುಕುಗೊಳಿಸಿ ಘಟನೆಗೆ ಕಾರಣವೇನೆಂದು ಪತ್ತೆ ಹಚ್ಚಲಾಗುವುದು.ತನಿಖೆಗೆ ಸಂಬಂಧಪಟ್ಟಂತೆ ಎಲ್ಲಾ ಇಲಾಖೆಗಳು ಸಹಕರಿಸಬೇಕೆಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗಸ್ವಾಮಿ, ಶಿಕ್ಷಣ ಇಲಾಖೆಯ ಕಾಮಾಕ್ಷಮ್ಮ, ತಿಪಟೂರು ಡಿವೈಎಸ್ಪಿ ವೇಣುಗೋಪಾಲ್, ಆರೋಗ್ಯ ಇಲಾಖೆಯ ಎಪಿಡೆಮಿಯಾಲಜಿಸ್ಟ್, ಮೈಕ್ರೋ ಬಯೋಲಜಿಸ್ಟ್, ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X