ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಕಾರ್ಕಳ, ಮಾ.13: ನಿಟ್ಟೆ ಪರಪ್ಪಾಡಿ ಜಂಕ್ಷನ್ ಬಳಿ ಮಾ.12ರಂದು ಸಂಜೆ 6:20ರ ಸುಮಾರಿಗೆ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಪ್ರವೀಣ ಶೆಟ್ಟಿ(26) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿದ್ದ ವಿಶಾಲ್ ಬಸ್ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





