Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಅಪಘಾತ: ಪಿಕ್‌ಅಪ್ ವಾಹನ ಮಗುಚಿ ನಾಲ್ವರ...

​ಅಪಘಾತ: ಪಿಕ್‌ಅಪ್ ವಾಹನ ಮಗುಚಿ ನಾಲ್ವರ ಸ್ಥಿತಿ ಗಂಭೀರ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ ನಡೆದ ಘಟನೆ ಅಪಘಾತ:

ವಾರ್ತಾಭಾರತಿವಾರ್ತಾಭಾರತಿ13 March 2017 11:11 PM IST
share

ಪಿಕ್‌ಅಪ್ ವಾಹನ ಮಗುಚಿ ನಾಲ್ವರ ಸ್ಥಿತಿ ಗಂಭೀರ
ಮಡಿಕೇರಿ, ಮಾ.13: ಚಾಲಕನ ನಿಯಂತ್ರಣ ತಪ್ಪಿದ ಪಿಕ್‌ಅಪ್ ವಾಹನವೊಂದು ಮಗುಚಿದ ಪರಿಣಾಮ 21 ಕಾರ್ಮಿಕರು ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ವೀರಾಜಪೇಟೆ ಕೊಡವ ಸಮಾಜದ ಬಳಿ ನಡೆದಿದೆ.


  ತೋಟದ ಕೆಲಸ ಮುಗಿಸಿ ತಮ್ಮ ತಮ್ಮ ಮನೆಗಳಿಗೆ ಕಾರ್ಮಿಕರು ಪಿಕ್‌ಅಪ್ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದ್ದು, ಚಾಲಕ ಪಾನಮತ್ತನಾಗಿದ್ದುದೇ ಘಟನೆಗೆ ಕಾರಣವೆಂದು ತಿಳಿದು ಬಂದಿದೆ. ಅಸ್ಸಾಂ ಮೂಲದ 21 ಕಾರ್ಮಿಕರನ್ನು ಕಕ್ಕಬ್ಬೆಯಲ್ಲಿರುವ ತೋಟವೊಂದರಿಂದ ವೀರಾಜಪೇಟೆಯಲ್ಲಿರುವ ಮನೆಗಳಿಗೆ ಕರೆ ತರಲಾಗುತ್ತಿತ್ತು. ಈ ಸಂದರ್ಭ ಕಾವೇರಿ ಶಾಲೆ ಬಳಿ 5.55 ಗಂಟೆ ಸುಮಾರಿಗೆ ಏರು ದಾರಿಯಲ್ಲಿ ಪಿಕ್‌ಅಪ್ ಮಗುಚಿದೆ.


 ಈ ಸಂದರ್ಭ ಪಿಕ್‌ಅಪ್ ಅಡಿಗೆ ಸಿಲುಕಿಕೊಂಡ 21 ಕಾರ್ಮಿಕರು ತೀವ್ರವಾಗಿ ಗಾಯಗೊಂಡರು. ತಂಡೋಪ ತಂಡವಾಗಿ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಕಾರ್ಮಿಕರನ್ನು ಹೊರತೆಗೆಯಲು ಹರಸಾಹಸ ಪಟ್ಟರು. ಗಾಯಾಳುಗಳಿಗೆ ವೀರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ 6 ಆ್ಯಂಬ್ಯುಲೆನ್ಸ್ ವಾಹನದಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆ ತಂದು ದಾಖಲಿಸಲಾಯಿತು.
 ವೈದ್ಯರು ಮತ್ತು ದಾದಿಯರ ತಂಡ ತುರ್ತು ಚಿಕಿತ್ಸೆ ನೀಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿಯೇ ಇದೆ. ಕಾರ್ಮಿಕರು ರಕ್ತ ಸುರಿಸುತ್ತಾ ಕಣ್ಣೀರಿಡುತ್ತಿದ್ದ ದೃಶ್ಯ ಕಂಡು ಬಂತು. ವಿವಿಧ ಸಂಘ ಸಂಸ್ಥೆಗಳು ಕಾರ್ಮಿಕರ ನೆರವಿಗೆ ಮುಂದಾಗಿವೆ.


 ಒಂದೇ ಪಿಕ್‌ಅಪ್‌ನಲ್ಲಿ 21 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಚಾಲಕ ಪಾನಮತ್ತನಾಗಿದ್ದ. ಮಧ್ಯಾಹ್ನ ಗೆಳೆಯನ ಕೊಠಡಿಯಲ್ಲಿ ಪಾರ್ಟಿ ಮಾಡಿ ಪಾನಮತ್ತನಾಗಿದ್ದ ಚಾಲಕ ಅದೇ ಗುಂಗಿನಲ್ಲಿ ಸಂಜೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಚಾಲಕ ಕೂಡ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ವೀರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಮೂವರು ಮಂಗಳೂರು ಆಸ್ಪತ್ರೆಗೆ ರವಾನೆ
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ರುಕಿಯಾ, ರುಸಂದರ್ ಹಾಗೂ ಮುಸ್ಲಿಮಾದಿನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
 ಉಳಿದಂತೆ ಫಝಿದಾ, ನಸೀಮಾ,, ಅಲ್ಮಿನ್, ತೌಸಿಲ್ ಅಬ್ದುಲ್ ರೆಹಮಾನ್, ಬಾನು, ಶಹಿರಾನ್ ಫೈಝಲ್, ಮಜೀದ್, ಮುಸ್ತಾಕ್ ಸೇರಿದಂತೆ 21 ಮಂದಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಹಾಗೂ ನಗರ ಕಾಂಗ್ರೆಸ್ ಕಾರ್ಯಕರ್ತರು ಗಾಯಾಳುಗಳಿಗೆ ಸಹಾಯ ಹಸ್ತ ಚಾಚಿದ್ದು, ಸಾಂತ್ವನ ಹೇಳುತ್ತಿದ್ದಾರೆ.
ಪಿಕ್‌ಅಪ್ ಚಾಲಕ ಬೋಪಣ್ಣ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X