Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದುಬೈ: KSCC ವತಿಯಿಂದ ಬೃಹತ್ ರಕ್ತದಾನ...

ದುಬೈ: KSCC ವತಿಯಿಂದ ಬೃಹತ್ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ14 March 2017 4:06 PM IST
share
ದುಬೈ: KSCC ವತಿಯಿಂದ ಬೃಹತ್ ರಕ್ತದಾನ ಶಿಬಿರ

ದುಬೈ, ಮಾ.14: ಕರ್ನಾಟಕ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ (KSCC) ಇದರ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ದುಬೈ ಸರಕಾರದ ಹೆಲ್ತ್ ಅಥೋರಿಟಿ ಮತ್ತು ಕಮ್ಯುನಿಟಿ ಡೆವಲಪ್‌ಮೆಂಟ್ ಅಥೋರಿಟಿ ಇದರ ಸಹಯೋಗದೊಂದಿಗೆ ಮಾರ್ಚ್ 10ರಂದು, ದೇರಾ ದುಬೈಯ ಯೂನಿಯನ್ ಮೆಟ್ರೋ ಸ್ಟೇಷನ್ ನಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ದುಬೈಯ ಉದ್ಯಮಿ ಅಬ್ದುಲ್ ರಝಾಕ್ ರಕ್ತದಾನಿಗಳಿಗೆ ಉಡುಗೊರೆಯನ್ನು ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಕ್ತದಾನದ ಮಹತ್ವವನ್ನು ವಿವರಿಸಿ ರಕ್ತದಾನವು ಹೇಗೆ ಒಂದು ಜೀವವನ್ನು ರಕ್ಷಿಸುತ್ತದೆ ಎಂಬ ಬಗ್ಗೆ ತಿಳಿಸಿದರು ಹಾಗೂ ಕಾರ್ಯಕ್ರಮದ ಸಂಘಟಕರನ್ನು ಶ್ಲಾಘಿಸಿದರು. 

 KSCC ಇದರ ಉಪಾಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ರವರು 'ಕರ್ನಾಟಕ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್' ಇದರ ಕಾರ್ಯ ವೈಖರಿ ಮತ್ತು ಉದ್ದೇಶಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಅವರು ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಅನಿವಾಸಿ ಭಾರತೀಯರನ್ನು ಅಬಿವೃದ್ಧಿ ಪಡಿಸುವ ಕ್ಲಬ್ ನ ಉದ್ದೇಶಗಳ ಬಗ್ಗೆ ವಿವರಿಸಿದರು.

KSCCಗೆ ನಿರಂತರವಾಗಿ ಸಹಕರಿಸುತ್ತಿರುವ ಕಮ್ಯುನಿಟಿ ಡೆವಲಪ್‌ಮೆಂಟ್ ಅಥೋರಿಟಿಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ಇದು KSCC ವತಿಯಿಂದ ನಡೆಯುವ ಎರಡನೆಯ ರಕ್ತದಾನ ಶಿಬಿರವಾಗಿದೆ. ಕ್ಲಬ್ ನ ವತಿಯಿಂದ ಇತ್ತೀಚೆಗೆ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಕಾರ್ಮಿಕ ದಿನಾಚರಣೆ ಮುಂತಾದ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು ಮತ್ತು ಇಂದಿನ ಕಾಲಘಟ್ಟದಲ್ಲಿ ರಕ್ತದಾನದ ಪ್ರಯೋಜನಗಳು ಮತ್ತು ಪ್ರಾಮುಖ್ಯತೆಯನ್ನು ವಿವರಿಸಿದರು.

ಕಮ್ಯುನಿಟಿ ಡೆವಲಪ್‌ಮೆಂಟ್ ಅಥೋರಿಟಿ (CDA) ಮತ್ತು ದುಬೈ ಸರಕಾರವು KSCCಯ ಸಮಾಜ ಸೇವೆಗಳನ್ನು ಪರಿಗಣಿಸಿ ಶ್ಲಾಘನೆಯ ಪ್ರಮಾಣ ಪತ್ರ ನೀಡಿ ಅಭಿನಂದಿಸಿತು. 

KSCC ವ್ಯವಸ್ಥಾಪಕ ಮುಹಮ್ಮದ್ ಶಾಫಿ, ಹೆಲ್ತ್ ಫರ್ಸ್ಟ್ ಫಾರ್ಮಸಿಯ ಪ್ರಾಯೋಜಕ ಪ್ರತಿನಿಧಿ, ಅಬ್ದುಲ್ ರಶೀದ್, ಡೆಕೋ ಸ್ಪೇಸ್ ಇಂಟೀರಿಯರ್ಸ್ ಇದರ ಪಾಲುದಾರ ಅಬ್ದುಲ್ ಹಮೀದ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಪಾಳ್ಗೊಂಡವರು ರಕ್ತದಾನ ಮಾಡಿದರು. ಭಾಗವಹಿಸಿದ ಪ್ರತಿಯೊಬ್ಬರಿಗೂ ಲಘು ಉಪಹಾರ, ಉಡುಗೊರೆ ಮತ್ತು ಅಭಿನಂದನಾ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು. ಬೆಳಗ್ಗೆ 8 ಗಂಟೆಯಿಂದ ಮದ್ಯಾಹ್ನ ಒಂದು ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ನಿರ್ದೇಶಕ ರಿಯಾಝ್ ಸಜಿಪ್  ಎಲ್ಲ ರೀತಿಯ ಸಹಕಾರ ನೀಡಿದ ದುಬೈ ಹೆಲ್ತ್ ಅಥೋರಿಟಿ ಸಿಬ್ಬಂದಿಗೆ KSCC ಪರವಾಗಿ ಸ್ಮರಣಿಕೆ ನೀಡಿದರು. ಪ್ರಾಯೋಜಕರಾದ ಹೆಲ್ತ್ ಫರ್ಸ್ಟ್ ಫಾರ್ಮಸಿಯ ಶಾಜು ರಾಮಕೃಷ್ಣನ್ ಮತ್ತು ಯುಎಇ ಎಕ್ಸ್ಚೇಂಜ್ ನ ಗುರು ಪ್ರಸಾದ್  ಕದ್ರಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. 

ಸಂಯೋಜಕರಾದ ದುಬೈ ಸರಕಾರದ ಹೆಲ್ತ್ ಅಥೋರಿಟಿ ಮತ್ತು ಕಮ್ಯುನಿಟಿ ಡೆವಲಪ್‌ಮೆಂಟ್ ಅಥೋರಿಟಿ, ಪ್ರಾಯೋಜಕರಾದ ಡೆಕೋ ಸ್ಪೇಸ್ ಇಂಟೀರಿಯರ್ಸ್, ಹೆಲ್ತ್ ಫರ್ಸ್ಟ್ ಫಾರ್ಮಸಿ, ಯುಎಇ ಎಕ್ಸ್‌ಚೇಂಜ್‌, ಪ್ರೈಮ್ ಮೆಡಿಕಲ್ ಸೆಂಟರ್, DHA ಸಿಬ್ಬಂದಿ, ದಾನಿಗಳು ಹಾಗೂ ಈ ಕಾರ್ಯಕ್ರಮವನ್ನು ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಮುಹಮ್ಮದ್ ಇಸ್ಮಾಯಿಲ್ ರವರು ಧನ್ಯವಾದ ಸಮರ್ಪಿಸಿದರು.

ಮುಹಮ್ಮದ್ ಫರಾಝ್ ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X