ಬಂಟ್ವಾಳ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ, ಮಾ. 14: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು ಮಲ್ಲೂರು ತಾಲೂಕಿನ ಮರಾಟಿಕೋಡಿ ನಿವಾಸಿ ಜೀವನ್ ಪೂಜಾರಿ(33) ಬಂಧಿತ ಆರೋಪಿ. 2008ರಲ್ಲಿ ಕೊಳ್ನಾಡು ಗ್ರಾಮದ ಸಾಲೆತ್ತೂರು ಎಂಬಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಈತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 143, 144, 148, 158, 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈತ ಮಂಗಳವಾರ ಮಂಗಳೂರು ಸಮೀಪದ ಮಲ್ಲೂರು ಎಂಬಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಉಪ ವಿಭಾಗದ ಡಿವೈಎಸ್‌ಪಿ ರವೀಶ್ ಸಿ.ಆರ್. ಮಾರ್ಗದರ್ಶನದಲ್ಲಿ ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
Next Story





