ಕಲ್ಯಾಣಪುರ: ಜಾನಪದ ಕ್ರೀಡೋತ್ಸವ

ಉಡುಪಿ, ಮಾ.14: ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಮತ್ತು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ದೈಹಿಕಶಿಕ್ಷಣ ವಿಭಾಗದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಜಾನಪದ ಕ್ರೀಡೋತ್ಸವ ವನ್ನು ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಲಗೋರಿಯನ್ನು ಹೊಡೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಕಾಲೇಜಿನ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೊ ಮಾತನಾಡಿ, ಆಧುನಿಕತೆಯ ಭರಾಟೆಯಲ್ಲಿ ಮರೆಯಾಗುತ್ತಿರುವ ಜಾನಪದ ಕ್ರೀಡೆಗಳನ್ನು ಎಳೆಯ ತಲೆಮಾರಿಗೆ ಹಚ್ಚುವ ಮತ್ತು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡೆಗಳು ಸಹಕಾರಿಯಾಗಲಿವೆ ಎಂದರು.
ಕ್ರೀಡಾಕೂಟದಲ್ಲಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ರೆ.ಫಾ.ಡಾ.ಅನಿಲ್ ಪ್ರಕಾಶ್ ಕ್ಯಾಸ್ತಾಲಿನೋ ಉಪಸ್ಥಿತರಿದ್ದರು. ಪರಿಷತ್ತಿನ ಜಿಲ್ಲಾಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಕ ಡೊಲ್ವಿನ್ ಡಯಾಸ್ ವಂದಿಸಿದರು.
Next Story





