Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಚೇರ್ಮನ್ ಹುದ್ದೆ ತ್ಯಜಿಸಿದ...

ಐಸಿಸಿ ಚೇರ್ಮನ್ ಹುದ್ದೆ ತ್ಯಜಿಸಿದ ಶಶಾಂಕ್ ಮನೋಹರ್

ವಾರ್ತಾಭಾರತಿವಾರ್ತಾಭಾರತಿ15 March 2017 6:14 PM IST
share
ಐಸಿಸಿ ಚೇರ್ಮನ್ ಹುದ್ದೆ ತ್ಯಜಿಸಿದ ಶಶಾಂಕ್ ಮನೋಹರ್

ದುಬೈ,ಮಾ.15: ಅತ್ಯಂತ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಶಶಾಂಕ್ ಮನೋಹರ್ ಐಸಿಸಿ ಚೇರ್ಮನ್ ಹುದ್ದೆಗೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಕಳೆದ 8 ತಿಂಗಳಿಂದ ಐಸಿಸಿ ಚೇರ್ಮನ್ ಆಗಿ ಕಾರ್ಯನಿರ್ವಹಿಸಿರುವ ನಾಗ್ಪುರದ ವಕೀಲ ಮನೋಹರ್ ವೈಯಕ್ತಿಕ ಕಾರಣ ನೀಡಿ ಪ್ರತಿಷ್ಠಿತ ಹುದ್ದೆಯನ್ನು ತ್ಯಜಿಸಿದ್ದಾರೆ.

 59ರ ಹರೆಯದ ಮನೋಹರ್ ಐಸಿಸಿ ಸಿಇಒ ಡೇವ್ ರಿಚರ್ಡ್‌ಸನ್‌ಗೆ ಇ-ಮೇಲ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಎರಡು ವರ್ಷಗಳ ಅಧಿಕಾರದ ಅವಧಿ ಕೊನೆಗೊಳ್ಳುವ ಮೊದಲೇ ಮನೋಹರ್ ದಿಢೀರನೆ ಈ ನಿರ್ಧಾರ ಕೈಗೊಳ್ಳಲು ನಿರ್ದಿಷ್ಟ ಕಾರಣವೇನೆಂದು ಪತ್ರದಲ್ಲಿ ಸ್ಪಷ್ಟಪಡಿಸಿಲ್ಲ.

ವಿಶ್ವದ ಮೂರು ಬಲಾಢ್ಯ ಕ್ರಿಕೆಟ್ ಮಂಡಳಿಗಳಾದ ಬಿಸಿಸಿಐ, ಕ್ರಿಕೆಟ್ ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಐಸಿಸಿಯ ಆದಾಯದಲ್ಲಿ ಸಿಂಹಪಾಲು ಪಡೆಯುತ್ತಿದ್ದವು. ಶ್ರೀನಿವಾಸನ್ ಐಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಿಗ್‌ತ್ರಿ ಪದ್ದತಿಯನ್ನು ಜಾರಿಗೆ ತಂದಿದ್ದರು.

  ಕಳೆದ ಫೆಬ್ರವರಿಯಲ್ಲಿ ನಡೆದ ಐಸಿಸಿ ಸಭೆಯಲ್ಲಿ ಐಸಿಸಿ ಆದಾಯ ಹಂಚಿಕೆ ಮಾದರಿಯಲ್ಲಿ ಸುಧಾರಣೆ ತರಲು ಪ್ರಸ್ತಾವ ಸಲ್ಲಿಸಲಾಗಿದ್ದು, ಈ ಪ್ರಸ್ತಾವಕ್ಕೆ ಮನೋಹರ್ ಕೂಡ ಆರಂಭದಿಂದ ಬೆಂಬಲ ವ್ಯಕ್ತಪಡಿಸಿದ್ದರು. ಎಪ್ರಿಲ್‌ನಲ್ಲಿ ನಡೆಯಲಿರುವ ಐಸಿಸಿ ಮುಂದಿನ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ಪಡೆಯುವ ಸಾಧ್ಯತೆಯಿದೆ. ಇದೀಗ ಐಸಿಸಿ ಚೇರ್ಮನ್ ಹುದ್ದೆಗೆ ರಾಜೀನಾಮೆ ನೀಡಿರುವ ಮನೋಹರ್ ಐಸಿಸಿ ಪ್ರಮುಖ ಸಭೆಗೆ ಹಾಜರಾಗುವುದರಿಂದ ತಪ್ಪಿಸಿಕೊಂಡಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.

ಐಸಿಸಿ ಆದಾಯ ಹಂಚಿಕೆಯ ಮಾದರಿಯಲ್ಲಿ ಬದಲಾವಣೆಯಾದರೆ ಬಿಸಿಸಿಐಗೆ ತೀವ್ರ ಹಿನ್ನಡೆಯಾಗಲಿದ್ದು, ಕಳೆದ ಐಸಿಸಿ ಸಭೆಯಲ್ಲಿ ಬಿಸಿಸಿಐಯನ್ನು ಪ್ರತಿನಿಧಿಸಿದ್ದ ಆಡಳಿತಾಧಿಕಾರಿ ಸಮಿತಿಯ ಸದಸ್ಯ ವಿಕ್ರಂ ಲಿಮಾಯೆ ಐಸಿಸಿ ಹೊಸ ಸುಧಾರಣೆ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

‘‘ನಾನು ಕಳೆದ ವರ್ಷ ಅವಿರೋಧವಾಗಿ ಮೊದಲ ಸ್ವತಂತ್ರ ಐಸಿಸಿ ಚೇರ್ಮನ್ ಆಗಿ ಆಯ್ಕೆಯಾಗಿದ್ದೆ. ಉತ್ತಮ ಕೆಲಸ ಮಾಡಲು ಪ್ರಯತ್ನಪಟ್ಟಿದ್ದೇನೆ. ಮಂಡಳಿಯ ಕಾರ್ಯನಿರ್ವಹಣೆಯ ವೇಳೆ ಕೆಲವೊಂದು ವಿಷಯದ ಬಗ್ಗೆ ನ್ಯಾಯೋಚಿತ ಹಾಗೂ ತಾರತಮ್ಯರಹಿತ ನಿರ್ಧಾರ ಕೈಗೊಳ್ಳಲು ಪ್ರಯತ್ನಿಸಿದ್ದೇನೆ. ವೈಯಕ್ತಿಕ ಕಾರಣದಿಂದ ಐಸಿಸಿ ಚೇರ್ಮನ್ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಕ್ಷಣವೇ ಚೇರ್ಮನ್ ಹುದ್ದೆಗೆ ರಾಜೀನಾಮೆ ಪತ್ರ ಸಲ್ಲಿಸುತ್ತಿದ್ದೇನೆ’’ ಎಂದು ರಾಜೀನಾಮೆ ಪತ್ರದಲ್ಲಿ ಮನೋಹರ್ ಸ್ಪಷ್ಟಪಡಿಸಿದ್ದಾರೆ.

‘‘ತುಂಬು ಹೃದಯದಿಂದ ಬೆಂಬಲ ನೀಡಿರುವ ಐಸಿಸಿಯ ಎಲ್ಲ ನಿರ್ದೇಶಕರು, ಆಡಳಿತ ವರ್ಗ ಹಾಗೂ ಸಿಬ್ಬಂದಿ ಬಳಗಕ್ಕೆ ಕೃತಜ್ಞತೆ ಸಲ್ಲಿಸಲು ಬಯಸುವೆ. ಐಸಿಸಿ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಹಾರೈಸುವೆ’’ ಎಂದು ಮನೋಹರ್ ತಿಳಿಸಿದ್ದಾರೆ.

ಲೋಧಾ ಸಮಿತಿಯ ಸುಧಾರಣೆಗಳನ್ನು ಜಾರಿಗೆ ಅಸಮರ್ಥರಾಗಿ ಮನೋಹರ್ ಕಳೆದ ವರ್ಷ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮನೋಹರ್ ಮುಳುಗುವ ಹಡಗನ್ನು ಬಿಟ್ಟು ಸುರಕ್ಷಿತ ಸ್ಥಳಕ್ಕೆ ಸೇರಿದ್ದಾರೆ ಎಂದು ಮನೋಹರ್ಗೆ  ಟೀಕಾಕಾರರು ವಾಗ್ದಾಳಿ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X