ಕರ್ನಾಟಕ ಬಜೆಟ್-2017: ಸ್ಥಾಪನೆಯಾಗಲಿವೆ 5 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ !

ಬೆಂಗಳೂರು, ಮಾ.15: ಕ್ಯಾನ್ಸರ್, ಹೃದಯ ರೋಗಗಳು, ಇತರ ಗಂಭೀರ ರೋಗಗಳಿಗೆ ಚಿಕಿತ್ಸೆ ನೀಡಲು 5 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.
ದಾವಣಗೆರೆ, ರಾಮನಗರ, ತುಮಕೂರು, ವಿಜಯಪುರ ಮತ್ತು ಕೋಲಾರದಲ್ಲಿ ಸ್ಥಾಪನೆಯಾಗಲಿವೆ. ತಲಾ 25 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತದೆ.
ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲು 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹಾಗೂ 3 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಇಂದಿರಾಗಾಂದಿ ಮಕ್ಕಳ ಆಸ್ಪತ್ರೆಯ ಮಾದರಿಯಲ್ಲಿ ಪ್ರಾದೇಶಿಕ ಹಾಗೂ ಮಕ್ಕಳ ಆರೋಗ್ಯ ಸಂಸ್ಥೆ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.
ಇನ್ನು ಚಿತ್ರದುರ್ಗ, ಬಾಗಲಕೋಟೆ, ಹಾವೇರಿ, ಯಾದಗಿರಿ, ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರಿನಲ್ಲಿ 6 ವೈದ್ಯಕೀಯ ಕಾಲೇಜು ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದೆ.
16,500 ಕಿರಿ ಮಹಿಳಾ ಆರೋಗ್ಯ ಸಹಾಯಕರಿಗೆ ತಾಯಿ ಮತ್ತು ಮಗುವಿನ ಅನುಸರಣಾ ವ್ಯವಸ್ಥೆಯಡಿ ಕಂಪ್ಯೂಟರ್ ಟ್ಯಾಬ್ ವಿತರಿಸಲಾಗುವುದು.
Next Story





