ಮಸಿ ಪ್ರಕರಣ: 7 ಆರೋಪಿಗಳಿಗೆ ಜಾಮೀನು ಮಂಜೂರು
ದಾವಣಗೆರೆ, ಮಾ.15: ಸಾಹಿತಿ ಯೋಗೀಶ್ ಮಾಸ್ಟರ್ ಮುಖಕ್ಕೆ ಮಸಿ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಮಂದಿ ಆರೋಪಿಗಳಿಗೆ ಇಲ್ಲಿನ 1ನೆ ಜೆಎಂಎಫ್‌ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬಂಧಿಸಿದ್ದ ಇಬ್ಬರು ಆರೋಪಿಗಳಾದ ಶಿವಪ್ರಸಾದ್, ಚೇತನ್ ಜೊತೆಗೆ ಉಳಿದ ಐವರು ಆರೋಪಿಗಳಾದ ಮಂಜುನಾಥ್, ಬದರಿನಾಥ್, ವಿಶ್ವನಾಥ್, ಮಲ್ಲಿಕಾರ್ಜುನ್ ಹಾಗೂ ಮಂಜುನಾಥ್ ಮಂಗಳವಾರ ನ್ಯಾಯಾಲಯಕ್ಕೆ ಶರಣಾಗಿದ್ದರು.
ನ್ಯಾಯಾಧೀಶರು ಎಲ್ಲಾ ಆರೋಪಿಗಳಿಂದ ತಲಾ 10 ಸಾವಿರ ರೂ. ವೌಲ್ಯದ ಜಾಮೀನು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ ಆದೇಶ ಹೊರಡಿಸಿದ್ದಾರೆ.
Next Story





