Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜ ಕಲ್ಯಾಣ

ಸಮಾಜ ಕಲ್ಯಾಣ

ವಾರ್ತಾಭಾರತಿವಾರ್ತಾಭಾರತಿ16 March 2017 12:42 AM IST
share

<ಎಸ್ಸಿ-ಎಸ್ಟಿ ವಿಧವೆಯರ ಮರು ವಿವಾಹಕ್ಕೆ 3 ಲಕ್ಷ ರೂ.ಪ್ರೋತ್ಸಾಹ ಧನ

ಬಿಪಿಎಲ್, ಎಸ್ಸಿ-ಎಸ್ಟಿ ಕುಟುಂಬಗಳಿಗೆ ಗೃಹ ನಿರ್ಮಾಣಕ್ಕಾಗಿ ನಿಗದಿಪಡಿಸಲಾಗಿರುವ ಘಟಕ ವೆಚ್ಚ ಗ್ರಾಮೀಣ ಪ್ರದೇಶದಲ್ಲಿ 1.75 ಲಕ್ಷ ರೂ. ಮತ್ತು ನಗರ ಪ್ರದೇಶಗಳಲ್ಲಿ 2 ಲಕ್ಷ ರೂ.ಹೆಚ್ಚಳ. ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡದ ವಿಧವೆಯರು ಮರುವಿವಾಹವಾದಲ್ಲಿ ಅವರಿಗೆ 3 ಲಕ್ಷ ರೂ. ಪ್ರೋತ್ಸಾಹ ಧನ.

<ಎಸ್ಸಿ-ಎಸ್ಟಿ ಯುವಕರು, ಯುವತಿಯರು ತಮ್ಮ ಸಮುದಾಯದ ಒಳಗೆ ಅಂತರ್ಜಾತಿ ವಿವಾಹವಾದಲ್ಲಿ ಅಂತಹವರಿಗೆ 2 ಲಕ್ಷ ರೂ.ಪ್ರೋತ್ಸಾಹ ಧನ. ಎಸ್ಸಿ-ಎಸ್ಟಿ ಉದ್ಯಮಿಗಳಿಗೆ ಬ್ಯಾಂಕ್ ಮತ್ತು ಕೆಎಸ್‌ಎಫ್‌ಸಿಯಲ್ಲಿ ಸಾಲ ಪಡೆಯಲು ಸಮಾನಾಂತರ ಖಾತರಿ (collateral securityCredit Guarantee Fund Trust ) ಒದಗಿಸಲು ನೆರವಿನೊಂದಿಗೆ 100 ಕೋಟಿ ರೂ.ಗಳ ಮೂಲ ನಿಧಿ ಸ್ಥಾಪನೆ.

<ಜಿಲ್ಲೆಗೆ ಒಂದರಂತೆ ತಲಾ 1 ಕೋಟಿ ರೂ. ವೆಚ್ಚದಲ್ಲಿ 30 ಮೊರಾರ್ಜಿ ವಸತಿ ಶಾಲೆಗಳನ್ನು ವಿಜ್ಞಾನ ಮತ್ತು ಗಣಿತ ವಿಷಯಗಳೊಂದಿಗೆ ಪಿಯುಸಿ ಮೇಲ್ದರ್ಜೆಗೆ. ಹಾಸ್ಟೆಲ್‌ಗಳು, ವಸತಿ ಶಾಲೆಗಳು, ಆಶ್ರಮ ಶಾಲೆಗಳು ಮತ್ತು ಅನುದಾನಿತ ಖಾಸಗಿ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಆಹಾರ ಭತ್ತೆ ಪ್ರತಿ ವಿದ್ಯಾರ್ಥಿಗೆ ಮಾಸಿಕ 100 ರೂ.ಯಷ್ಟು ಹೆಚ್ಚಿಸಿ 1500 ರೂ.ಗೆ ನಿಗದಿ.

<1 ಲಕ್ಷ ಎಸ್ಸಿ-ಎಸ್ಟಿ ನಿರುದ್ಯೋಗಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ. ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಸ್ಸಿ-ಎಸ್ಟಿ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳ ಬಳಕೆಗಾಗಿ ಬುಕ್ ಬ್ಯಾಂಕ್‌ಗಳ ಸ್ಥಾಪನೆ.

<1 ರಿಂದ 8ನೆ ತರಗತಿಯ ಎಸ್ಸಿ-ಎಸ್ಟಿ ಮೆಟ್ರಿಕ್ ಪೂರ್ವ ಡೇ ಸ್ಕಾಲರ್ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ 250 ರೂ.ಯಷ್ಟು ಏರಿಕೆ. 15 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 6 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ. 5 ಜಿಲ್ಲೆಗಳಲ್ಲಿ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಚೇರಿಗಳ ಪ್ರಾರಂಭ.

<ಎಸ್ಸಿ-ಎಸ್ಟಿಯವರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿಗಳನ್ನು ಕೊರೆಯುವ ಘಟಕ ವೆಚ್ಚ 3 ಲಕ್ಷ ರೂ.ಗೆ ಹಾಗೂ ಸಬ್ಸಿಡಿ 2.5 ಲಕ್ಷ ರೂ.ಗೆ ಹೆಚ್ಚಳ. ಜೊತೆಗೆ ಈ ಫಲಾನುಭವಿಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಮೂಲಕ ಹನಿ ಹಾಗೂ ತುಂತುರು ನೀರಾವರಿ ಮತ್ತು ಕೃಷಿ ಹೊಂಡ ನಿರ್ಮಾಣಕ್ಕೆ ನೆರವು.

<ಎಸ್ಸಿ-ಎಸ್ಟಿಯ ಭೂರಹಿತ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ ಯೋಜನೆಯಡಿ ಘಟಕ ವೆಚ್ಚ 15 ಲಕ್ಷ ರೂ.ಗೆ ಏರಿಕೆ. ವೃತ್ತಿ ಕೌಶಲ್ಯ ಪಡೆದ 1,400 ಪರಿಶಿಷ್ಟ ಜಾತಿ ಮತ್ತು 600 ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕರಿಗೆ 5 ಲಕ್ಷ ರೂ.ವರೆಗಿನ ಘಟಕ ವೆಚ್ಚದ ಸ್ವಯಂ ಉದ್ಯೋಗ ಘಟಕ ಆರಂಭಿಸಲು 2.5 ಲಕ್ಷ ರೂ. ಅಥವಾ ಶೇ.50ರಷ್ಟು ಯೋಜನಾ ವೆಚ್ಚ ಸಹಾಯಧನ.

 <ವಾಹನ ಚಾಲನಾ ಪರವಾನಿಗೆ ಹೊಂದಿರುವ 3,500 ಎಸ್ಸಿ-ಎಸ್ಟಿ ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿಗಳನ್ನು ಖರೀದಿಸಲು 3 ಲಕ್ಷ ರೂ. ವರೆಗೆ ಅಥವಾ ವಾಹನದ ಶೇ.50ರಷ್ಟು ಸಹಾಯಧನ. ಸಫಾಯಿ ಕರ್ಮಚಾರಿಗಳು ವಾಸಿಸುವ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ, ಅವರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ, ಸಫಾಯಿ ಕರ್ಮಚಾರಿಗಳಿಗೆ ಜ್ಯೋತಿ ಸಂಜೀವಿನಿ ಮಾದರಿಯಲ್ಲಿ ಆರೋಗ್ಯ ಸೌಲಭ್ಯ. ಕಾನೂನು ಪದವೀಧರರ ಮಾಸಿಕ ತರಬೇತಿ ಭತ್ತೆ 5 ಸಾವಿರ ರೂ.ಗೆ ಹೆಚ್ಚಳ. ಆದಿವಾಸಿ ಸಮುದಾಯ ಭವನಗಳ ನಿರ್ಮಾಣಕ್ಕೆ 15 ಕೋಟಿ ರೂ., ದಾವಣಗೆರೆ ಸೇವಾಲಾಲ್ ಟ್ರಸ್ಟ್‌ನ ಮೂಲನಿಧಿಗೆ 5 ಕೋಟಿ ರೂ., ಮುಖ್ಯಮಂತ್ರಿಯವರ ಮಾದರಿ ಗ್ರಾಮ ಯೋಜನೆಯಡಿಯಲ್ಲಿ ಶೇ.50 ಮತ್ತು ಅದಕ್ಕಿಂತ ಅಧಿಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆಯಿರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಯೋಜನೆಯನ್ನು ಒಂದುಗೂಡಿಸಿ ಅನುದಾನ ನೀಡಿಕೆ.

<ಎಸ್ಸಿ-ಎಸ್ಟಿ ವಸತಿ ನಿಲಯಗಳಲ್ಲಿ ಕಂಪ್ಯೂಟರ್ ಶಿಕ್ಷಣ, ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ವಿಶೇಷ ತರಬೇತಿಯ ವ್ಯವಸ್ಥೆ. ಮುಂತಾದ ಪರೀಕ್ಷೆಗಳ ಮುಖಾಂತರ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಾನುಕೂಲಕ್ಕೆ ಪದವಿಪೂರ್ವ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವ ತರಬೇತಿ. ಎಸ್ಸಿ-ಎಸ್ಟಿಗಳ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ರಾಜ್ಯ ಸರಕಾರಕ್ಕೆ ಮಾರ್ಗದರ್ಶನ ಹಾಗೂ ಸಲಹೆ ನೀಡಲು ರಾಜ್ಯ ಆದಿವಾಸಿಗಳ ಸಲಹಾ ಪರಿಷತ್ ಸ್ಥಾಪನೆಗೆ ಅನುಮೋದನೆ ಕೋರಿ ಭಾರತ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ.

<ಜೇನುಕುರುಬ, ಕೊರಗ, ಸೋಲಿಗ, ಕಾಡುಕುರುಬ, ಎರವ, ಗೌಡಲು, ಹಸಲುರು, ಇರುಳಿಗ, ಸಿದ್ಧಿ, ಮಲೆಕುಡಿಯ, ಹಕ್ಕಿ-ಪಿಕ್ಕಿ, ತೋಡ, ಮೇದ ಇತ್ಯಾದಿ ಆದಿವಾಸಿ ಸಮುದಾಯದ ಅಭಿವೃದ್ಧಿಗೆ ಮತ್ತು ಸ್ವಯಂಉದ್ಯೋಗ ಕಲ್ಪಿಸಲು 200 ಕೋಟಿ ರೂ.ಪ್ರೋತ್ಸಾಹ.
<ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳಿಂದ ಒಂದು ಲಕ್ಷ ಎಸ್ಸಿ-ಎಸ್ಟಿಗಳ ಆರ್ಥಿಕಾಭಿವೃದ್ಧಿಗಾಗಿ ನೇರ ಸಾಲ ಯೋಜನೆ; 40 ಸಾವಿರ ರೂ. ಘಟಕ ವೆಚ್ಚ- 15 ಸಾವಿರ ರೂ. ಸಹಾಯಧನ, ಶೇ.4ರ ಬಡ್ಡಿದರದಲ್ಲಿ 25 ಸಾವಿರ ರೂ. ಸಾಲ ನೀಡಲು 300 ಕೋಟಿ ರೂ.ಮೀಸಲು.
<2 ಲಕ್ಷ ಬಿಪಿಎಲ್ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಯೋಗದೊಂದಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಗೆ ಒಟ್ಟಾರೆಯಾಗಿ 6,363 ಕೋಟಿ ರೂ.ಒದಗಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X