ವೈದ್ಯರ ನೇಮಕಾತಿಗಾಗಿ ಅರ್ಜಿ ಅಹ್ವಾನ

ತುಮಕೂರು, ಮಾ.16: ಜಿಲ್ಲೆಯ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ, ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಯುಷ್ ವೈದ್ಯರು ಮತ್ತು ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾ.22 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಗಾಗಿ ದಿನಾಂಕ 16/03/2017ರ ಪ್ರಜಾವಾಣಿ ದಿನಪತ್ರಿಕೆಯನ್ನು ವೀಕ್ಷಿಸಬಹುದಾಗಿದೆ.
Next Story





