Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಪತ್ತೆಯಾದ ಮಗ ವಾರದ ಬಳಿಕ ಮಗಳಾಗಿ...

ನಾಪತ್ತೆಯಾದ ಮಗ ವಾರದ ಬಳಿಕ ಮಗಳಾಗಿ ಬಂದಳು !

ವಾರ್ತಾಭಾರತಿವಾರ್ತಾಭಾರತಿ16 March 2017 3:01 PM IST
share
  • ನಾಪತ್ತೆಯಾದ ಮಗ ವಾರದ ಬಳಿಕ ಮಗಳಾಗಿ ಬಂದಳು !
  • ನಾಪತ್ತೆಯಾದ ಮಗ ವಾರದ ಬಳಿಕ ಮಗಳಾಗಿ ಬಂದಳು !
  • ನಾಪತ್ತೆಯಾದ ಮಗ ವಾರದ ಬಳಿಕ ಮಗಳಾಗಿ ಬಂದಳು !
  • ನಾಪತ್ತೆಯಾದ ಮಗ ವಾರದ ಬಳಿಕ ಮಗಳಾಗಿ ಬಂದಳು !

ಅಹ್ಮದಾಬಾದ್,ಮಾ.16: ಮಾಧವಪುರದ ಪ್ರತಿಷ್ಠಿತ ಚಿನ್ನಾಭರಣ ವ್ಯಾಪಾರಿಯೋರ್ವರ ಕಿರಿಯ ಪುತ್ರ ಶ್ಯಾಮ್(25) ಒಂದು ವಾರದಿಂದಲೂ ನಾಪತ್ತೆಯಾಗಿದ್ದ. ಮನೆಯವರು ಈ ಬಗ್ಗೆ ಪೊಲೀಸರಲ್ಲಿ ದೂರನ್ನೂ ಸಲ್ಲಿಸಿದ್ದರು. ಹೀಗಾಗಿ ಮನೆಯಲ್ಲಿನ ಪೋನ್‌ನ ಗಂಟೆ ಬಡಿದುಕೊಂಡಾಗ ಎಲ್ಲರೂ ಕಾತರದಿಂದ ಓಡಿ ಬಂದಿದ್ದರು. ನಿರೀಕ್ಷಿಸಿದಂತೆ ಅದು ಪೊಲೀಸರ ಕರೆಯಾಗಿತ್ತು. ಅವರು ಆಶಿಸಿದ್ದಂತೆ ಪೊಲೀಸರು ‘ನಿಮ್ಮ ಮಗು ಸಿಕ್ಕಿದೆ ’ಎಂದು ಹೇಳಿದ್ದರು. ಆದರೆ ‘ಶ್ಯಾಮ್ ಈಗ ನಿಮ್ಮ ಮಗನಾಗಿ ಉಳಿದಿಲ್ಲ,ಮಗಳಾಗಿದ್ದಾಳೆ’ಎಂದು ಪೊಲೀಸರು ಹೇಳುತ್ತಾರೆಂದು ಆ ಕುಟುಂಬ ಖಂಡಿತವಾಗಿಯೂ ನಿರೀಕ್ಷಿಸಿರಲಿಲ್ಲ !

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲು ಶ್ಯಾಮ್ ಮನೆಯಿಂದ ನಾಪತ್ತೆ ಯಾಗಿದ್ದ.ಆತನ ಹೆತ್ತವರು ಮತ್ತು ತಂಗಿ ಈ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ.

ಶ್ಯಾಮ್ ಪದವೀಧರನಾಗಿದ್ದು, ಕುಟುಂಬದ ವ್ಯವಹಾರದಲ್ಲಿ ಕೈಜೋಡಿಸಿದ್ದ. ಕೆಲವು ವರ್ಷಗಳ ಹಿಂದಿನಿಂದಲೂ ಆತನಿಗೆ ತಾನು ಗಂಡಲ್ಲ,ಗಂಡಿನ ಶರೀರದಲ್ಲಿರುವ ಹೆಣ್ಣು ಎಂದು ಅನಿಸುತ್ತಿತ್ತು. ತಾನು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತೇನೆ ಎಂದಾಗ ಮನೆಯವರು ಒಪ್ಪಿರಲಿಲ್ಲ. ಅಸಲಿಗೆ ತಾನು ಹೆಣ್ಣು ಎಂಬ ಆತನ ಹೇಳಿಕೆಯನ್ನೇ ಅವರು ನಂಬಿರಲಿಲ್ಲ. ಅದೇ ಕೊನೆ, ಶ್ಯಾಮ್ ಮತ್ತೆಂದೂ ಆ ವಿಷಯವನ್ನು ಮನೆಯಲ್ಲಿ ಎತ್ತಿರಲಿಲ್ಲ. ಹೀಗಾಗಿ ಕಳೆದ ವಾರ ಶ್ಯಾಮ್ ನಾಪತ್ತೆಯಾಗುವವರೆಗೂ ಎಲ್ಲವೂ ಸರಿಹೋಯಿತು ಎಂದು ಮನೆಯವರು ನೆಮ್ಮದಿಯಿಂದಿದ್ದರು.

ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನಾರಂಭಿಸಿದ್ದ ಪೋಲಿಸರು ಮೊಬೈಲ್ ಟವರ್ ನೆರವಿನಿಂದ ಆತ ನವರಂಗಪುರದಲ್ಲಿದ್ದಾನೆ ಎಂಬ ಮಾಹಿತಿ ಪಡೆದಿದ್ದರು. ಅಲ್ಲಿಗೆ ತೆರಳಿ ಹುಡುಕಾಡಿದಾಗ ಖಾಸಗಿ ಆಸ್ಪತ್ರೆಯೊಂದರ ಹೊರಗೆ ಆತನ ಬೈಕ್ ಪತ್ತೆಯಾಗಿತ್ತು. ಶ್ಯಾಮ್ ಅಲ್ಲಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ. ತಾನು ಸ್ವಂತ ಇಚ್ಛೆಯಿಂದ ಈ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಗಿ ಆತ ಹೇಳಿಕೆ ನೀಡಿದ್ದು, ಮನೆಯವರಿಗೆ ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ.

ಶ್ಯಾಮ್ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲು ಹಿಂದೆಯೇ ನಿರ್ಧರಿಸಿದ್ದ. ಪೂರ್ವಸಿದ್ಧತೆಯಾಗಿ ಕಳೆದ ಒಂದೂವರೆ ವರ್ಷಗಳಿಂದಲೂ ಆತ ಹಾರ್ಮೋನ್ ಬದಲಾವಣೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ.

ಕುಟುಂಬದ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದರಾದರೂ ಶ್ಯಾಮ್ ಅವರನ್ನು ಭೇಟಿಯಾಗಲು ನಿರಾಕರಿಸಿದ್ದಾನೆ. ಈ ನಿಟ್ಟಿನಲ್ಲಿ ಪೊಲೀಸರ ಪ್ರಯತ್ನವೂ ವಿಫಲಗೊಂಡಿದೆ ಜಂಡರ್ ಡಿಸ್‌ಫೋರಿಯಾ

ವ್ಯಕ್ತಿಯೋರ್ವ ತನ್ನ ಶರೀರದ ಬಗ್ಗೆ ಇರಿಸುಮುರಿಸುಗೊಂಡು,ತಾನು ಹೆಣ್ಣು ಎಂದು ಭಾವಿಸುವ ವೈಕಲ್ಯವನ್ನು ಜಂಡರ್ ಡಿಸ್‌ಫೋರಿಯಾ ಎನ್ನುತ್ತಾರೆ.ಇಂತಹವರನ್ನು ಕೌನ್ಸೆಲಿಂಗ್‌ಗೆ ಒಳಪಡಿಸಲಾಗುತ್ತದೆ. ಅಗತ್ಯವಾದರೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡುತ್ತಾರೆ ಮತ್ತು ಪುರುಷ ಪರಿಪೂರ್ಣ ಮಹಿಳೆಯಾಗಿ ಬದಲಾಗುತ್ತಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X