Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಸದೆಯರ ಅನುಪಾತದಲ್ಲಿ ಭಾರತಕ್ಕೆ 148ನೆ...

ಸಂಸದೆಯರ ಅನುಪಾತದಲ್ಲಿ ಭಾರತಕ್ಕೆ 148ನೆ ಸ್ಥಾನ :ಮಹಿಳಾ ಮೀಸಲಾತಿಗೆ ವಿಶ್ವಸಂಸ್ಥೆ ಕರೆ

ವಾರ್ತಾಭಾರತಿವಾರ್ತಾಭಾರತಿ16 March 2017 6:27 PM IST
share
ಸಂಸದೆಯರ ಅನುಪಾತದಲ್ಲಿ ಭಾರತಕ್ಕೆ 148ನೆ ಸ್ಥಾನ :ಮಹಿಳಾ ಮೀಸಲಾತಿಗೆ ವಿಶ್ವಸಂಸ್ಥೆ ಕರೆ

ವಿಶ್ವಸಂಸ್ಥೆ (ನ್ಯೂಯಾರ್ಕ್), ಮಾ. 16: ವಿಶ್ವಸಂಸ್ಥೆಯ 193 ಸದಸ್ಯ ದೇಶಗಳ ಪೈಕಿ, ಮಹಿಳಾ ಸದಸ್ಯರ ಅನುಪಾತದಲ್ಲಿ ಭಾರತ 148ನೆ ಸ್ಥಾನದಲ್ಲಿದೆ. ಪಟ್ಟಿಯನ್ನು ಬಿಡುಗಡೆ ಮಾಡಿದ ವಿಶ್ವಸಂಸ್ಥೆಯ ಮಹಿಳಾ ಘಟಕದ ಮುಖ್ಯಸ್ಥೆ ಫುಮ್‌ಝೈಲ್ ಮ್ಲಾಂಬೊ-ಎನ್‌ಕುಕ, ಸಂಸತ್ತುಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದರು.

ಪಟ್ಟಿಯನ್ನು ಇಲ್ಲಿ ಬುಧವಾರ ಫುಮ್‌ಝೈಲ್ ಮ್ಲಾಂಬೊ-ಎನ್‌ಕುಕ ಮತ್ತು ಅಂತರ್ ಸಂಸದೀಯ ಒಕ್ಕೂಟ (ಐಪಿಯು) ಜಂಟಿಯಾಗಿ ಬಿಡುಗಡೆ ಮಾಡಿದರು.

ಲೋಕಸಭೆಯಲ್ಲಿ 11.8% (542 ಸದಸ್ಯ ಬಲದ ಸದನದಲ್ಲಿ 64) ಮತ್ತು ರಾಜ್ಯಸಭೆಯಲ್ಲಿ 11% (245 ಸದಸ್ಯ ಬಲದ ಸದನದಲ್ಲಿ 27) ಮಹಿಳಾ ಸದಸ್ಯರಿದ್ದಾರೆ ಎಂಬುದಾಗಿ ಪಟ್ಟಿ ತಿಳಿಸುತ್ತದೆ.

ಮಹಿಳಾ ಸಚಿವರ ಅನುಪಾತದಲ್ಲಿ ಭಾರತ 88ನೆ ಸ್ಥಾನದಲ್ಲಿದೆ. ಭಾರತೀಯ ಸಚಿವ ಸಂಪುಟದಲ್ಲಿ ಐವರು (18.5%) ಮಹಿಳೆಯರಿದ್ದಾರೆ.
ಆದಾಗ್ಯೂ, ಮಹಿಳೆಯರು ಮಹತ್ವದ ಹುದ್ದೆಗಳಲ್ಲಿದ್ದಾರೆ. ಸುಮಿತ್ರಾ ಮಹಾಜನ್ ಲೋಕಸಭೆಯ ಸ್ಪೀಕರ್ ಆಗಿದ್ದರೆ, ಸುಶ್ವಾ ಸ್ವರಾಜ್ ವಿದೇಶ ವ್ಯವಹಾರಗಳ ಸಚಿವೆಯಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಐಪಿಯು ಮಹಾಕಾರ್ಯದರ್ಶಿ ಮಾರ್ಟಿನ್ ಚುನ್‌ಗಾಂಗ್, ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸಬೇಕೆಂಬ ಬೇಡಿಕೆಗಳನ್ನು ಬೆಂಬಲಿಸಿದರು. ಮೀಸಲಾತಿಯು ಲಿಂಗ ಸಮಾನತೆ ಸಾಧಿಸುವ ಪ್ರಕ್ರಿಯೆಗೆ ವೇಗ ನೀಡಬಹುದು ಎಂಬ ನಿರೀಕ್ಷೆಯನ್ನು ವ್ಯಕ್ತಪಡಿಸಿದರು.

ಈಗಿನ ಅಭಿವೃದ್ಧಿ ದರದಂತೆ, ಶಾಸಕಾಂಗ ಸಭೆಗಳಲ್ಲಿ ಮಹಿಳೆಯರ ಸಂಖ್ಯೆಯು ಪುರುಷರ ಸಂಖ್ಯೆಗೆ ಸರಿಗಟ್ಟಲು 50 ವರ್ಷಗಳು ಬೇಕಾಗುತ್ತವೆ ಎಂದು ಅವರು ಹೇಳಿದರು.

ಪ್ರಥಮ ಸ್ಥಾನದಲ್ಲಿ ರುವಾಂಡ

ಮಹಿಳಾ ಸಂಸದರ ಅನುಪಾತದಲ್ಲಿ, ಕೆಳಮನೆಯಲ್ಲಿ 61.3% ಮಹಿಳೆಯರನ್ನು ಹೊಂದಿರುವ ರುವಾಂಡ ಪ್ರಥಮ ಸ್ಥಾನದಲ್ಲಿದೆ. ಎರಡು ಮತ್ತು ಮೂರನೆ ಸ್ಥಾನಗಳಲ್ಲಿ ಕ್ರಮವಾಗಿ 53.1 % ಅನುಪಾತ ಹೊಂದಿರುವ ಬೊಲಿವಿಯ ಮತ್ತು 48.9 % ಅನುಪಾತ ಹೊಂದಿರುವ ಕ್ಯೂಬ ಇವೆ.

ದಕ್ಷಿಣ ಏಶ್ಯದಲ್ಲಿ, ಕೆಳಮನೆಯಲ್ಲಿ 29.6% ಮಹಿಳಾ ಅನುಪಾತದೊಂದಿಗೆ ನೇಪಾಳ 48ನೆ ಸ್ಥಾನ ಹೊಂದಿದ್ದರೆ, ಪಾಕಿಸ್ತಾನ 20.6 % ಅನುಪಾತದೊಂದಿಗೆ 89ನೆ ಸ್ಥಾನದಲ್ಲಿದೆ. ಬಾಂಗ್ಲಾದೇಶ 20.3 % ದೊಂದಿಗೆ 91ನೆ ಸ್ಥಾನದಲ್ಲಿದ್ದರೆ, 5.8% ಮಹಿಳಾ ಅನುಪಾತದೊಂದಿಗೆ ಶ್ರೀಲಂಕಾ 179ನೆ ಸ್ಥಾನದಲ್ಲಿದೆ.

ಮಹಿಳಾ ಸಚಿವರ ಪಟ್ಟಿಯಲ್ಲಿ 52.9% ಪ್ರಾತಿನಿಧ್ಯ ನೀಡಿರುವ ಬಲ್ಗೇರಿಯ, ಫ್ರಾನ್ಸ್ ಮತ್ತು ನಿಕಾರಗುವ ಮೊದಲ ಸ್ಥಾನವನ್ನು ಹಂಚಿಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X