Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019ರ ಲೋಕಸಭೆ ಚುನಾವಣೆಗೆ ಬಿಜೆಪಿ...

2019ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭ

ದಲಿತರ ಪರ ಕಾರ್ಯಕ್ರಮಕ್ಕೆ ಎ.14ರಿಂದ ಚಾಲನೆ ನೀಡಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ16 March 2017 10:50 PM IST
share

ಹೊಸದಿಲ್ಲಿ, ಮಾ.16: ಯುವಜನರನ್ನು ಕೇಂದ್ರ ಸರಕಾರದ ಜನಕಲ್ಯಾಣ ಕಾರ್ಯಕ್ರಮ ಮತ್ತು ಉತ್ತಮ ಆಡಳಿತದ ರಾಯಭಾರಿಗಳನ್ನಾಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಮುಖಂಡರಿಗೆ ಕರೆ ನೀಡಿದ್ದಾರೆ. ಯುವಜನರನ್ನು ತಲುಪುವಂತೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಮೋದಿ ಹೇಳಿದರು. 2019ರ ಲೋಕಸಭಾ ಚುನಾವಣೆಗೆ ಈಗಿಂದೀಗಲೇ ಸಿದ್ಧತೆ ನಡೆಸುವ ಇರಾದೆಯೊಂದಿಗೆ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಮಾತನಾಡಿದರು.


ದಲಿತರು ಈ ಬಾರಿಯ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ, ದಲಿತರ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮತ್ತು ಎಪ್ರಿಲ್ 14ರ ಅಂಬೇಡ್ಕರ್ ಜಯಂತಿಯಂದು ಈ ಉಪಕ್ರಮಗಳಿಗೆ ಚಾಲನೆ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ವಾರಾವಧಿಯ ಈ ಕಾರ್ಯಕ್ರಮಗಳನ್ನು ಪ್ರತೀ ಪಂಚಾಯತ್ ಮತ್ತು ವಾರ್ಡ್ ವ್ಯಾಪ್ತಿಯಲ್ಲಿ ನಡೆಸಲು ಮತ್ತು ಪಕ್ಷದ ಸ್ಥಾಪನಾ ದಿನವಾಗಿರುವ ಎಪ್ರಿಲ್ 6ರಂದು ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ಬಳಿಕ ಮುಂದಿನ ಲೋಕಸಭಾ ಚುನಾವಣೆ ಪಕ್ಷದ ಮುಂದಿರುವ ಬಹುದೊಡ್ಡ ಸವಾಲಾಗಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದರು. ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದ ಬಳಿಕ ನಡೆಯುತ್ತಿರುವ ಪ್ರಪ್ರಥಮ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಸಾಧನೆಗೆ ಸಂತಸ ವ್ಯಕ್ತಪಡಿಸಿ ಇದಕ್ಕೆ ಕಾರಣಕರ್ತರಾದವರನ್ನು ಅಭಿನಂದಿಸಲಾಯಿತು ಹಾಗೂ ಪಕ್ಷದ ಮುಂದಿರುವ ಸವಾಲಿನ ಬಗ್ಗೆ ಚರ್ಚಿಸಲಾಯಿತು. ಜನರು ಡಿಜಿಟಲ್ ಪಾವತಿ ವ್ಯವಸ್ಥೆಯಾದ ಬಿಎಚ್‌ಐಎಂ(ಭೀಮ್) ಆ್ಯಪ್ ಬಳಸಲು ಮತ್ತು ಡೌನ್‌ಲೋಡ್ ಮಾಡಿಕೊಳ್ಳಲು ಉತ್ತೇಜನ ನೀಡುವಂತೆ ಪ್ರಧಾನಿ ಮೋದಿ ಪಕ್ಷದ ಮುಖಂಡರಿಗೆ ತಿಳಿಸಿದ್ದಾಗಿ ಸಭೆಯ ಬಳಿಕ ಸಂಸದೀಯ ವ್ಯವಹಾರ ಸಚಿವ ಅನಂತ್‌ಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ಯುವಜನರು ಮಾಹಿತಿಗಾಗಿ ದಿನಪತ್ರಿಕೆ ಮತ್ತು ಟಿ.ವಿ ಚಾನೆಲ್‌ಗಿಂತ ಹೆಚ್ಚು ಮೊಬೈಲ್ ಫೋನ್ ಉಪಯೋಗಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೊಬೈಲ್ ಮಾಧ್ಯಮದ ಮೂಲಕ ಅವರನ್ನು ‘ಹಿಡಿಯಬೇಕು’. ದ್ವಿತೀಯ ಪಿಯುಸಿ ಹಂತದಲ್ಲೇ ಅವರನ್ನು ಸಂಪರ್ಕಿಸಬೇಕು ಎಂದು ಪಕ್ಷದ ಮುಖಂಡರಿಗೆ ತಿಳಿಸಿದರು. 2014ರ ಲೋಕಸಭಾ ಚುನಾವಣೆಯ ಬಳಿಕ ಇದೀಗ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಪಕ್ಷಕ್ಕೆ ಇದಿರಾದ ಸವಾಲಾಗಿತ್ತು. 2019ರ ಲೋಕಸಭಾ ಚುನಾವಣೆ ಮತ್ತೊಂದು ಸವಾಲಾಗಿದ್ದು ಇದನ್ನೆದುರಿಸಲು ಸಿದ್ಧರಾಗುವಂತೆ ತಿಳಿಸಿದರು. ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸೂಚಿಸುವ ಹಾಗೂ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿ ಕಾರ್ಯಕರ್ತರ ಪ್ರಯತ್ನಗಳನ್ನು ಅಭಿನಂದಿಸುವ ಗೊತ್ತುವಳಿಯನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಬಿಜೆಪಿಯು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಉತ್ತಮ ಆಡಳಿತ ನೀಡುತ್ತದೆ ಎಂದು ಗೊತ್ತುವಳಿಯಲ್ಲಿ ಆಶಯ ವ್ಯಕ್ತಪಡಿಸಲಾಗಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಗೊತ್ತುವಳಿ ಸೂಚಿಸಿದರು ಮತ್ತು ವಿತ್ತ ಸಚಿವ ಅರುಣ್ ಜೇಟ್ಲೀ ಬೆಂಬಲಿಸಿದರು. ಈ ಗೊತ್ತುವಳಿಯನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅನಂತಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X