ಮಂಗಳೂರು: ಮಾ.19ರಂದು ಉಪ್ಪಿನಂಗಡಿಯಲ್ಲಿ ಸಲಫಿ ಸಮಾವೇಶ
ಮಂಗಳೂರು, ಮಾ.17: ಸೌತ್ ಕರ್ನಾಟಕ ಸಲಫಿ ಮೂವ್‍ಮೆಂಟ್ ಹಮ್ಮಿಕೊಂಡಿರುವ ಕುರ್‍ಆನ್ ಸಂದೇಶ ಪ್ರಚಾರ ಅಭಿಯಾನದ ಅಂಗವಾಗಿ ಮಾ.19 ರಂದು ರವಿವಾರ ಮಗ್ರಿಬ್ ನಮಾಝ್‍ನ ಬಳಿಕ ಉಪ್ಪಿನಂಗಡಿಯಲ್ಲಿ ಸಲಫಿ ಸಮಾವೇಶವು ಜರಗಲಿದೆ.
ಈ ಸಮಾವೇಶದಲ್ಲಿ ಹಿರಿಯ ವಿದ್ವಾಂಸ ಚುಯೈಲಿ ಅಬ್ದುಲ್ಲ ಮುಸ್ಲಿಯಾರ್ ಉಪನ್ಯಾಸ ನೀಡಲಿದ್ದಾರೆ. ಸಲಫಿ ಮೂವ್‍ಮೆಂಟ್‍ನ ಕೇಂದ್ರ ಸಮಿತಿ ಅಧ್ಯಕ್ಷ ಯು.ಎನ್. ಅಬ್ದುಲ್ ರಝಾಕ್ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದು, ಸೈಯ್ಯದ್ ಇಬ್ರಾಹೀಂ ಹಾದಿ ತಂಗಳ್ ಆತೂರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆಂದು ಉಪ್ಪಿನಂಗಡಿ ಘಟಕದ ಅಧ್ಯಕ್ಷ ಅಬ್ದುಲ್ ರಹೆಮಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





