ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ವೈದ್ಯರಿಗೆ ಸ್ನಾತಕೋತ್ತರ ಅಧ್ಯಯನದಲ್ಲಿ ಮೀಸಲಾತಿಗೆ ಚಿಂತನೆ
ಹೊಸದಿಲ್ಲಿ, ಮಾ.17: ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಸರಕಾರಿ ವೈದ್ಯರಿಗೆ ಪ್ರೋತ್ಸಾಹ ನೀಡುವ ಕ್ರಮವಾಗಿ, ಇವರಿಗೆ ಸ್ನಾತಕೋತ್ತರ ಅಧ್ಯಯನದಲ್ಲಿ ಮೀಸಲಾತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸರಕಾರ ತಿಳಿಸಿದೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾಹಿತಿ ನೀಡಿದ ಆರೋಗ್ಯ ಇಲಾಖೆಯ ಸಹಾಯಕ ಸಚಿವ ಫಗ್ಗಾನ್ ಸಿಂಗ್ ಕುಲಸ್ತೆ , ಈ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಮಿತಿ (ತಿದ್ದುಪಡಿ) ಮಸೂದೆಯೊಂದನ್ನು ರೂಪಿಸಲು ನಿರ್ಧರಿಸಲಾಗಿದೆ. ಸರಕಾರಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿಯ ಶೇ.50ರಷ್ಟು ಸೀಟುಗಳನ್ನು ಕನಿಷ್ಠ ಮೂರು ವರ್ಷ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿದ ವೈದ್ಯರಿಗೆ ಮೀಸಲಿರಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ. ಸ್ನಾತಕೋತ್ತರ ಪದವಿ ಪೂರೈಸಿದ ಬಳಿಕ ಇವರು ಮತ್ತೂ ಮೂರು ವರ್ಷ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಬಹುದು ಎಂದೂ ಸಚಿವರು ತಿಳಿಸಿದ್ದಾರೆ.
Next Story