ದ್ವಿತೀಯ ಪಿಯು ಪರೀಕ್ಷೆ: ದ.ಕ.ದಲ್ಲಿ 77, ಉಡುಪಿಯಲ್ಲಿ 30 ಗೈರು
ಮಂಗಳೂರು, ಮಾ.17: ಇಂದು ನಡೆದ ದ್ವಿತೀಯ ಪಿಯು ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 77 ಮಂದಿ ಗೈರು ಹಾಜರಾಗಿದ್ದರು.
ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 15,104 ವಿದ್ಯಾರ್ಥಿಗಳ ಪೈಕಿ 15,027 ಮಂದಿ ಹಾಜರಾಗಿದ್ದಾರೆ ಎಂದು ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
* ಉಡುಪಿ: ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಭೌತಶಾಸ್ತ್ರ ಪರೀಕ್ಷೆಗೆ ಒಟ್ಟು 30 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು ಎಂದು ಉಡುಪಿ ಜಿಲ್ಲಾ ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪರೀಕ್ಷೆಗೆ ಜಿಲ್ಲೆಯಿಂದ ಒಟ್ಟು 5,234 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 5,204 ಮಂದಿ ಪರೀಕ್ಷೆ ಬರೆದಿದ್ದಾರೆ. ಯಾವುದೇ ಅಕ್ರಮ, ಅವ್ಯವಹಾರಗಳು ವರದಿಯಾಗಿಲ್ಲ ಎಂದು ಡಿಡಿಪಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





