ಉಪ್ಪಿನಂಗಡಿಯಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ಗಂಭೀರ

ಉಪ್ಪಿನಂಗಡಿ, ಮಾ.18: ಮಿನಿ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಾಯರ್ಪಾಡಿ ನಿವಾಸಿ ಪ್ರಸಾದ್ ಗಾಯಗೊಂಡ ಬೈಕ್ ಸವಾರ. ರಾಷ್ಟ್ರೀಯ ಹೆದ್ದಾರಿ 48ರ ಉಪ್ಪಿನಂಗಡಿ ಬೈಪಾಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನ ಕಡೆಯಿಂದ ಬರುತ್ತಿದ್ದ ಲಾರಿ ಬೈಕನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ಬೈಕ್‌ನ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
Next Story





