Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾಪತ್ತೆಯಾಗಿದ್ದ ದಿಲ್ಲಿಯ...

ನಾಪತ್ತೆಯಾಗಿದ್ದ ದಿಲ್ಲಿಯ ಧರ್ಮಗುರುಗಳಿಬ್ಬರು ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ವಶದಲ್ಲಿ

ವಾರ್ತಾಭಾರತಿವಾರ್ತಾಭಾರತಿ18 March 2017 7:38 PM IST
share
ನಾಪತ್ತೆಯಾಗಿದ್ದ ದಿಲ್ಲಿಯ ಧರ್ಮಗುರುಗಳಿಬ್ಬರು ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ವಶದಲ್ಲಿ

ಲಾಹೋರ,ಮಾ.18: ಇಲ್ಲಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಲ್ಲಿಯ ಹಜರತ್ ನಿಝಾಮುದ್ದೀನ್ ದರ್ಗಾದ ಧರ್ಮಗುರುಗಳಿಬ್ಬರು ಮುತ್ತಹಿದಾ ಕೌಮಿ ಮೂವ್‌ಮೆಂಟ್ (ಎಂಕ್ಯೂಎಂ)ನೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ವಶದಲ್ಲಿದ್ದಾರೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿದವು.

ಹಝರತ್ ನಿಝಾಮುದ್ದೀನ್ ಔಲಿಯಾ ದರ್ಗಾದ ಮುಖ್ಯ ಧರ್ಮಗುರು ಸೈಯದ್ ಆಸಿಫ್ ನಿಝಾಮಿ (80) ಮತ್ತು ಅವರ ಸೋದರ ಪುತ್ರ ನಝಿಮ್ ನಿಝಾಮಿ ಅವರು ಮಾ.14ರಂದು ಇಲ್ಲಿಯ ಅಲ್ಲಾಮಾ ಇಕ್ಬಾಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರಾಚಿಗೆ ತೆರಳಲೆಂದು ಶಹೀನ್ ಏರ್‌ಲೈನ್ಸ್‌ನ ವಿಮಾನವನ್ನು ಹತ್ತಿದ್ದು, ಅವರನ್ನು ವಿಮಾನದಿಂದ ಕೆಳಗಿಳಿಸಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದ ಗುಪ್ತಚರ ಸಂಸ್ಥೆಯ ಅಧಿಕಾರಿಗಳು ವಿಚಾರಣೆಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಹೆಸರು ಹೇಳಿಕೊಳ್ಳಲು ಬಯಸದ ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿದವು.

ಎಂಕ್ಯೂಎಂ ಮುಖ್ಯಸ್ಥ ಅಲ್ತಾಫ ಹುಸೇನ್ ಜೊತೆ ನಂಟು ಹೊಂದಿರುವ ಆರೋಪದಲ್ಲಿ ಅವರಿಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದೂ ಅವು ಹೇಳಿದವು.

ಕರಾಚಿಯಲ್ಲಿ ಅಲ್ತಾಫ್‌ರ ಪಕ್ಷದವರೊಂದಿಗೆ ಅವರು ನಂಟು ಹೊಂದಿದ್ದಾರೆ ಎಂಬ ಆರೋಪದ ಕುರಿತು ಇಬ್ಬರನ್ನೂ ವಿಚಾರಣೆಗೊಳಪಡಿಸಲಾಗಿದ್ದು, ಆರೋಪವು ಸಿದ್ಧವಾಗದಿದ್ದರೆ ಅವರನ್ನು ಬಿಡುಗಡೆಗೊಳಿಸಲಾಗುವುದು ಎಂದೂ ಈ ಮೂಲಗಳು ಹೇಳಿದವು.

  1980ರ ದಶಕದಲ್ಲಿ ಪ್ರಮುಖವಾಗಿ ಜನಾಂಗೀಯ ಪಕ್ಷವಾಗಿ ಅಸ್ತಿತ್ವಕ್ಕೆ ಬಂದಿದ್ದ ಎಂಕ್ಯೂಎಂ 1947ರ ವಿಭಜನೆ ವೇಳೆ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ್ದ ಉರ್ದು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಸಿಂಧ್ ಪ್ರಾಂತ್ಯದ ನಗರ ಪ್ರದೇಶಗಳಲ್ಲಿ, ವಿಶೇಷವಾಗಿ ಕರಾಚಿ, ಹೈದರಾಬಾದ್, ಮೀರ್‌ಪುರ್ಖಾಸ್ ಮತ್ತು ಸುಕ್ಕುರ್‌ಗಳಲ್ಲಿ ರಾಜಕೀಯ ಪ್ರಾಬಲ್ಯ ಹೊಂದಿದೆ.

ಆಸಿಫ್ ನಿಝಾಮಿ ಕರಾಚಿಯಲ್ಲಿರುವ ತನ್ನ ಸೋದರಿಯನ್ನು ನೋಡಲೆಂದು ಅಲಿ ನಿಝಾಮಿ ಜೊತೆ ಮಾ.8ರಂದು ಪಾಕಿಸ್ತಾನಕ್ಕೆ ಆಗಮಿಸಿದ್ದರು. ಮಾ.13ರಂದು ಲಾಹೋರಕ್ಕೆ ಆಗಮಿಸಿದ್ದ ಅವರು ಪಾಕ್‌ಪಟ್ಟಣ್‌ನಲ್ಲಿರುವ ಸೂಫಿ ಸಂತ ಬಾಬಾ ಫರೀದ್ ಗಂಗ್ ಅವರ ದರ್ಗಾಕ್ಕೆ ಭೇಟಿ ನೀಡಿದ್ದರು. ಮಾ.14ರಿಂದ ಇಬ್ಬರೂ ನಾಪತ್ತೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X