Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಆರ್‌ಝಡ್ ಮರಳುಗಾರಿಕೆ ಪ್ರಕ್ರಿಯೆಗೆ...

ಸಿಆರ್‌ಝಡ್ ಮರಳುಗಾರಿಕೆ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸಚಿವ ಪ್ರಮೋದ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 March 2017 9:43 PM IST
share
ಸಿಆರ್‌ಝಡ್ ಮರಳುಗಾರಿಕೆ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸಚಿವ ಪ್ರಮೋದ್ ಸೂಚನೆ

ಉಡುಪಿ, ಮಾ.18: ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಕೂಲವಾಗುವಂತೆ ಹಾಗೂ ಕಾಮಗಾರಿಗಳಿಗೆ ಮರಳು ಲಭ್ಯವಾಗಿಸಲು ಸಿಆರ್‌ಝಡ್ ವ್ಯಾಪ್ತಿ ಯಲ್ಲಿ ಮರಳುಗಾರಿಕೆ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ಹಾಗೂ ಮಾರ್ಗದರ್ಶನ ನೀಡಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮರಳುಗಾರಿಕೆ ಬಗ್ಗೆ ಸಮಿತಿಯಲ್ಲಿರುವ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಆಲಿಸಿದ ಸಚಿವರು, ತಾವು ಹಿಂದಿನಿಂದಲೂ ನೀಡುತ್ತಿದ್ದ ಸಲಹೆಯನ್ನು ಪಾಲಿಸಿದ್ದರೆ ಜಿಲ್ಲೆಯಲ್ಲಿ ಮರಳುಗಾರಿಕೆ ಸಮಸ್ಯೆ ಸೃಷ್ಟಿ ಯಾಗುತ್ತಿರಲಿಲ್ಲ ಎಂದರು. ಮೀನುಗಾರಿಕೆಗೆ ಮರಳು ದಿಬ್ಬಗಳಿಂದ ತೊಂದರೆ ಯಾಗುತ್ತಿದ್ದು ಮೀನುಗಾರಿಕೆ ಇಲಾಖಾಧಿಕಾರಿಗಳ ಅಭಿಪ್ರಾಯವನ್ನು ಪಡೆದು ಮರಳುಗಾರಿಕೆ ಪ್ರಕ್ರಿಯೆಗೆ ಚಾಲನೆ ನೀಡಿ ಎಂದವರು ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಭೂವಿಜ್ಞಾನ ಹಾಗೂ ಗಣಿ ಇಲಾಖೆ ಅಧಿಕಾರಿ ಕುಮಾರ್ ಅವರಿಂದ ನೂತನ ಸಮಿತಿ ರಚನೆ ಸಂಬಂಧ ಪ್ರಸ್ತಾಪವನ್ನು ಆದಷ್ಟು ಶೀಘ್ರ ನೀಡುವಂತೆ ಹಾಗೂ 2016-17ನೇ ಸಾಲಿನಲ್ಲಿ 170 ತಾತ್ಕಾಲಿಕ ಪರವಾನಿಗೆದಾರರು ಪಾವತಿಸಿರುವ ರಾಜಧನವನ್ನು ಹಿಂದಿರುಗಿಸುವ ಬಗ್ಗೆಯೂ ತಕ್ಷಣವೇ ಸ್ಪಷ್ಟೀಕರಣ ನೀಡಿ ಎಂದು ಸೂಚನೆ ನೀಡಿದರು.

ಸಹಾಯಕ ಆಯುಕ್ತರಿಗೆ ಸಾಂಪ್ರದಾಯಿಕ ಮೀನುಗಾರರನ್ನು ಗುರುತಿಸುವ ಹೊಣೆಯನ್ನು ನೀಡಿ ಎಂದ ಸಚಿವರು, ಸ್ಥಳೀಯರಿಗೆ ಸಾಂಪ್ರದಾಯಿಕ ಮೀನುಗಾರಿಕೆ ನಡೆಸಲು ಅನುಕೂಲವಾಗುವಂತೆ ಆಯ್ಕೆ ನಡೆಸುವಾಗ ಅವರ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ವಾಸ್ತವ್ಯದ ವಿಳಾಸಗಳನ್ನು ತೆಗೆದುಕೊಳ್ಳುವಂತೆ, ಹಂತ ಹಂತವಾಗಿ ಮರಳುಗಾರಿಕೆ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

 ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧ, ಸಹಾಯಕ ಆಯುಕ್ತೆ ಶಿಲ್ಪಾನಾಗ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಗಣಿ ಇಲಾಖೆ ಅಧಿಕಾರಿ ಕೋದಂಡರಾಮಯ್ಯ, ಆರ್‌ಟಿಒ ಗುರುಮೂರ್ತಿ ಕುಲಕರ್ಣಿ, ಪರಿಸರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X