ಮಂಗಳೂರು ಏರ್‌ಪೋರ್ಟ್‌ನಲ್ಲಿ 69 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ

ಮಂಗಳೂರು, ಮಾ. 18: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದುಬೈಗೆ ತೆರಳುತ್ತಿದ್ದ ವ್ಯಕ್ತಿಯೋರ್ವನಿಂದ ಸುಮಾರು 69.50 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ಕಡಂಬೂರು ನಿವಾಸಿ ಮುಹಮ್ಮದ್ ಅಸ್ಗರ್ ಎಂದು ಗುರುತಿಸಲಾಗಿದೆ.
ಈತ ಬೆಳಗ್ಗೆ 8:30ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ದುಬೈಗೆ ಹೋಗಲು ವಿಮಾನ ನಿಲ್ದಾಣಕ್ಕೆ ಬಂದಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಯಾವುದೇ ದಾಖಲೆಯಿಲ್ಲದ 69.50ಲಕ್ಷ ರೂ. ಮೌಲ್ಯದ ದಿರ್ಹಮ್, ಡಾಲರ್, ಪೌಂಡ್, ರೂಬಲ್ ಕರೆನ್ಸಿಗಳನ್ನು ಪತ್ತೆ ಹಚ್ಚಿದ್ದು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Next Story





