ಮಾ.26: ಬೋಳಂತೂರಿನಲ್ಲಿ ರಕ್ತದಾನ ಶಿಬಿರ, ಆರೋಗ್ಯ ಕಾರ್ಡ್ ನೋಂದಣಿ

ವಿಟ್ಲ, ಮಾ.19: ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್, ಎನ್.ಸಿ.ರೋಡ್ ಹಾಗೂ ಸೆರ್ಕಳ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಯೆನೆಪೊಯ ಮೆಡಿಕಲ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಹಾಗೂ ಯೆನ್ ಆರೋಗ್ಯ ಕಾರ್ಡ್ ನೋಂದಣಿ ಕಾರ್ಯಕ್ರಮವು ಮಾ.26ರಂದು ಬೆಳಗ್ಗೆ ಬೋಳಂತೂರು-ಎನ್.ಸಿ.ರೋಡಿನ ಎಸ್ಸೆಸ್ಸೆಫ್ ನಗರದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿ.ಪಂ. ಸದಸ್ಯ ಎಂ.ಎಸ್.ಮುಹಮ್ಮದ್ ಅಧ್ಯಕ್ಷತೆ ವಹಿಸುವರು.
ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡ್, ಗೋಳ್ತಮಜಲು ಗ್ರಾ.ಪಂ. ಉಪಾಧ್ಯಕ್ಷ ಹಾಜಿ ಕೆ.ಎಸ್.ಮುಸ್ತಫಾ, ಸುರಿಬೈಲು ದಾರುಲ್ ಅಶ್-ಅರಿಯ್ಯ ಮ್ಯಾನೇಜರ್ ಮುಹಮ್ಮದಲಿ ಸಖಾಫಿ, ಇಬ್ರಾಹೀಂ ಖಲೀಲ್ ಮುಸ್ಲಿಯಾರ್, ಸಿರಾಜುದ್ದೀನ್ ಸಖಾಫಿ ಕನ್ಯಾನ, ಮುಹಮ್ಮದ್ ಅಸ್‌ಅದ್ ಸಖಾಫಿ, ಸಿ.ಎಂ.ಅಬೂಬಕರ್ ಲತೀಫಿ ಎಣ್ಮೂರು ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.





