Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ‘ಡೆಲ್ಟಾ’ ಕಣ್ಣಿನ ಆಸ್ಪತ್ರೆ...

ಮಂಗಳೂರು: ‘ಡೆಲ್ಟಾ’ ಕಣ್ಣಿನ ಆಸ್ಪತ್ರೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 March 2017 12:37 PM IST
share
ಮಂಗಳೂರು: ‘ಡೆಲ್ಟಾ’ ಕಣ್ಣಿನ ಆಸ್ಪತ್ರೆ ಉದ್ಘಾಟನೆ

ಮಂಗಳೂರು, ಮಾ.19: ನಗರದ ಬೆಂದೂರ್‌ವೆಲ್ ಮುಖ್ಯ ರಸ್ತೆಯಲ್ಲಿರುವ, ಹಳೆಯ ವಾಸನ್ ಕಣ್ಣಿನ ಆಸ್ಪತ್ರೆ ಕಟ್ಟಡದಲ್ಲಿ ನೂತನವಾಗಿ ಕಾರ್ಯಾರಂಭಿಸಲಿರುವ ‘ಡೆಲ್ಟಾ’ ಕಣ್ಣಿನ ಆಸ್ಪತ್ರೆಯು ರವಿವಾರ ಉದ್ಘಾಟನೆಗೊಂಡಿತು.
ಸಚಿವ ಯು.ಟಿ. ಖಾದರ್ ಆಸ್ಪತ್ರೆ, ಶಾಸಕ ಜೆ.ಆರ್.ಲೋಬೊ ಆಸ್ಪತ್ರೆ ಸಂಕೀರ್ಣದಲ್ಲಿರುವ ಡೆಲ್ಟಾ ಒಪ್ಟಿಕಲ್ಸ್, ಖ್ಯಾತ ವೈದ್ಯ ಡಾ.ಎಂ.ಶಾಂತಾರಾಮ ಶೆಟ್ಟಿ ಶಸ್ತ್ರಚಿಕಿತ್ಸಾ ವಿಭಾಗ, ಮನಪಾ ಕಾರ್ಪೊರೇಟರ್ ನವೀನ್ ಆರ್. ಡಿಸೋಜ ಡೆಲ್ಟಾ ಮೆಡಿಕಲ್ಸ್ ಅನ್ನು ಉದ್ಘಾಟಿಸಿದರು.

ಬಳಿಕ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಯು.ಟಿ.ಖಾದರ್ ವೈದ್ಯಕೀಯ ಕ್ಷೇತ್ರದ ಸೇವೆಯಲ್ಲಿ ಸಾಮಾಜಿಕ ಬದ್ಧತೆ ಮುಖ್ಯ. ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಮಾನವೀಯತೆಯೊಂದಿಗೆ ಬೆರೆತು ಕಡಿಮೆ ದರದಲ್ಲಿ ಅತ್ಯುತ್ತಮ ಸೇವೆ ನೀಡುವ ಮೂಲಕ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬೇಕು ಎಂದರಲ್ಲದೆ, ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ದಿನಂಪ್ರತಿ ನೂರಾರು ಹೆರಿಗೆಗಳಾಗುತ್ತಿವೆ. ‘ಡೆಲ್ಟಾ’ ಸಂಸ್ಥೆಯು ಅಲ್ಲಿನ ನವಜಾತ ಶಿಶುಗಳ ಕಣ್ಣಿನ ತಪಾಸಣೆಯನ್ನು ಉಚಿತವಾಗಿ ನೀಡಲು ಮುಂದೆ ಬರಬೇಕು ಎಂದು ನುಡಿದರು.

‘ಡೆಲ್ಟಾ’ ಸಂಸ್ಥೆಯು ಒಪ್ಟಿಕಲ್ಸ್ ಡಿಪ್ಲೊಮಾ ಕಾಲೇಜು ಸ್ಥಾಪಿಸಲು ಇಚ್ಛಿಸುವುದಾದರೆ ಎಲ್ಲ ರೀತಿಯ ನೆರವು ನೀಡಲು ಬದ್ಧನಾಗಿರುವುದಾಗಿ ಸಚಿವ ಖಾದರ್ ಭರವಸೆ ನೀಡಿದರು.

ಶಾಸಕ ಜೆ.ಆರ್.ಲೋಬೊ, ಖ್ಯಾತ ವೈದ್ಯ ಡಾ. ಎಂ. ಶಾಂತಾರಾಮ ಶೆಟ್ಟಿ, ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಶುಭ ಹಾರೈಸಿದರು.

ಡೆಲ್ಟಾ ಹೆಲ್ತ್ ಫೌಂಡೇಶನ್‌ನ ಅಧ್ಯಕ್ಷ ಡಾ.ಭರತ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಅಬ್ದುಲ್ ಹಮೀದ್, ಕೆ.ಎಂ.ಸಜ್ಜಾದ್, ಶನವಾಝ್ ಮುರಾದ್, ಮುಹಮ್ಮದ್ ಅಯಾಝ್, ಆಸ್ಪತ್ರೆಯ ವೈದ್ಯರಾದ ಡಾ.ವಸಂತ್ ಪೈ, ಡಾ.ಅನುಪಮಾ ಕಾರಂತ್, ಡಾ.ಪ್ರಜಕ್ತಾ ಕುಲಕರ್ಣಿ, ಡಾ. ಸುಧೀಂದ್ರ ಎ.ಎನ್., ಡಾ. ನಮೀತ್ ಡಿಸೋಜ, ಡಾ. ರಾಧಾಕೃಷ್ಣ ಎ.ಎನ್. ಉಪಸ್ಥಿತರಿದ್ದರು. ಆಸ್ಪತ್ರೆಯ ಆಡಳಿತಾಧಿಕಾರಿ ಬಿ.ಎ.ಮುಹಮ್ಮದ್ ಅಲಿ ಸ್ವಾಗತಿಸಿದರು. ಉಮರ್ ಯು.ಎಚ್. ವಂದಿಸಿದರು.

 *ಕೈಗೆಟಕುವ ದರದಲ್ಲಿ ವಿಶ್ವ ದರ್ಜೆಯ ಕಣ್ಣಿನ ಚಿಕಿತ್ಸೆ ನೀಡುವುದು ಸಂಸ್ಥೆಯ ಧ್ಯೇಯವಾಗಿದ್ದು, ನುರಿತ ವೈದ್ಯರ ತಂಡ, ವಿನೂತನ ಪ್ರಯೋಗಾಲಯ, ಸುಸಜ್ಜಿತ ತಪಾಸಣಾ ಕೇಂದ್ರ, ಮಹಿಳೆಯರು ಮತ್ತು ಮಕ್ಕಳಿಗೆ ಪ್ರತ್ಯೇಕ ವಿಭಾಗ, ಅತ್ಯಾಧುನಿಕ ಶಸ್ತ್ರಚಿಕಿತ್ಸಾ ವಿಭಾಗ, ಅತ್ಯುತ್ತಮ ಸಿಬ್ಬಂದಿ ಸೇವೆ ‘ಡೆಲ್ಟಾ’ದ ವಿಶೇಷತೆಯಾಗಿವೆ. ದೇಶ-ವಿದೇಶಗಳ ಅನೇಕ ಬ್ರಾಂಡ್‌ಗಳ ಫ್ರೇಮ್, ಲೆನ್ಸ್, ಕಾಂಟಾಕ್ಟ್ ಲೆನ್ಸ್‌ಗಳು ಡೆಲ್ಟಾ ಒಪ್ಟಿಕಲ್ಸ್ ನಲ್ಲಿ ಲಭ್ಯವಿದ್ದು, ತ್ವರಿತ ಸೇವೆ ನೀಡಲಾಗುತ್ತದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

*ಉದ್ಘಾಟನೆಯ ಕೊಡುಗೆಯಾಗಿ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಜೆ.ಆರ್.ಲೋಬೊರ ಶಿಫಾರಸು ಪತ್ರ ತಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೋಗಿಗಳಿಗೆ ಮಾ.19ರಿಂದ ಎ.19ರವರೆಗೆ ಉಚಿತ ನೇತ್ರ ತಪಾಸಣೆ, ಉಚಿತ ಕನ್ನಡಕ ಮತ್ತು ಶೇ.10 ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಬಿ.ಎ.ಮುಹಮ್ಮದ್ ಅಲಿ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X