ರಾಜಹಂಸ ಬಸ್ ಪಲ್ಟಿ: 8 ಜನರಿಗೆ ಗಾಯ

ಮಡಿಕೇರಿ ಮಾ.19: ಬೆಂಗಳೂರಿನಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ರಾಜಹಂಸ ಬಸ್ ಹೊನವಳ್ಳಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 8 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹೊನವಳ್ಳಿ ಗ್ರಾಮದ ತಿರುವಿನಲ್ಲಿರುವ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಒಂದು ಬದಿಗೆ ಉರುಳಿಬಿದ್ದಿದೆ. ಬಸ್‌ನಲ್ಲಿ ಒಟ್ಟು 25 ಮಂದಿ ಪ್ರಯಾಣಿಕರಿದ್ದು, ಇವರಲ್ಲಿ 8 ಮಂದಿಗೆ ಸಣ್ಣಪ್ರಮಾಣದ ಗಾಯಗಳಾಗಿವೆ.
ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸದಾನಂದ್, ಆದರ್ಶ್, ರಾಣಿ, ಸುಧಾ, ಆಸೀಫ್, ಸುನೀತಾ, ಮದನ್, ಹನುಮಂತ ಅವರುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸೋಮವಾರಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ.
Next Story





