ಕುಂದಾಪುರ: ನಿವೇಶನ ರಹಿತ ಅರ್ಜಿದಾರರ ಸಮಾವೇಶ

ಕುಂದಾಪುರ, ಮಾ.20: ಬೈಂದೂರು ಸಿಐಟಿಯು ಕಛೇರಿಯಲ್ಲಿ ಇತ್ತೀಚೆಗೆ ಆಯೋಜಿಸಲಾದ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಬೈಂದೂರು ವಲಯದ ನಿವೇಶನ ರಹಿತ ಅರ್ಜಿದಾರರ ಸಮಾವೇಶವನ್ನು ಸಂಘದ ಜಿಲ್ಲಾ ಉಪಾಧ್ಯಕ್ಷ ರಾಜೀವ ಪಡುಕೋಣೆ ಉದ್ಘಾಟಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸಂಘದ ಮುಖಂಡರಾದ ಯು.ದಾಸ ಭಂಡಾರಿ, ನಾಗರತ್ನ ನಾಡ, ಗಣೇಶ ಮೊಗವೀರ ಬೈಂದೂರು, ಪದ್ಮಾವತಿ, ಶ್ಯಾಮಲಾ ಮೊದಲಾದವರು ಉಪಸ್ಥಿತರಿದ್ದರು.
ಶಿರೂರು:
ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತ ಹಾಗೂ 94ಸಿ ಅರ್ಜಿದಾರರ ಬೃಹತ್ ಸಮಾವೇಶವನ್ನು ಶಿರೂರಿನ ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡ ಶೋಯೆಬ್ ಅರೆಹೊಳೆ ಇತ್ತೀಚೆಗೆ ಉದ್ಘಾಟಿಸಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ವೆಂಕಟೇಶ ಕೋಣಿ, ಮುಖಂಡರಾದ ಶೀಲಾವತಿ, ಯು.ದಾಸ ಭಂಡಾರಿ, ರಾಜೀವ ಪಡುಕೋಣೆ, ನಾಗರತ್ನ ನಾಡ, ಅಜಮುತ್ತುಲ್ಲ ಶಿರೂರು ಮೊದಲಾದವರು ಉಪಸ್ಥಿತರಿದ್ದರು.
ಉಪ್ಪುಂದ:
ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಯ ಆಶ್ರಯದಲ್ಲಿ ನಿವೇಶನ ರಹಿತ ಅರ್ಜಿ ದಾರರ ಬೃಹತ್ ಸಮಾವೇಶವನ್ನು ಉಪ್ಪುಂದ ಕಾಸನಾಡಿ ದೈವಸ್ಥಾನ ವಠಾರ ದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಮುಖಂಡ ರಾದ ಯು.ದಾಸ ಭಂಡಾರಿ, ರಾಜೀವ ಪಡುಕೋಣೆ, ನಾಗರತ್ನ ನಾಡ, ಪದ್ಮಾವತಿ ಶೆಟ್ಟಿ, ಕುಶಲ, ಮಾಧವ ದೇವಾಡಿಗ ಉಪ್ಪುಂದ, ಶ್ರೀಧರ ಉಪ್ಪುಂದ, ಚಂದ್ರ ಉಪ್ಪುಂದ ಉಪಸ್ಥಿತರಿದ್ದರು.
ಏಳಜಿತ್:
ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ 94ಸಿ ಅರ್ಜಿ ದಾರರ ಸಮಾವೇಶವು ಇತ್ತೀಚೆಗೆ ಯಳಜಿತ್ ಮಹಿಷ ಮರ್ಧಿನಿ ಸಭಾಂಗಣ ದಲ್ಲಿ ಜರಗಿತು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಮುಖಂಡ ರಾದ ರಾಜೀವ ಪಡುಕೋಣೆ, ನಾಗರತ್ನ ನಾಡ, ಪ್ರಭಾಕರ ಏಳಜಿತ್ ಮೊದಲಾದವರು ಉಪಸ್ಥಿತರಿದ್ದರು.







