ಮಾ.23: ಕರ್ನಾಟಕ ಏಕೀಕರಣ ಸಾಹಿತ್ಯ ಸಮ್ಮೇಳನ
ಮಂಗಳೂರು, ಮಾ.21: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಘಟಕವು ಮಾ.23ರಂದು ಬೆಳಿಗ್ಗೆ 10ಕ್ಕೆ ನಗರದ ಪಡೀಲಿನಲ್ಲಿರುವ ಅಮೃತ ಕಾಲೇಜ್ ಆಫ್ ಎಜುಕೇಶನ್ ಸಭಾಂಗಣದಲ್ಲಿ ಕರ್ನಾಟಕ ಏಕೀಕರಣ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ.
ಕೆನರಾ ಕಾಲೇಜಿನ ನಿವೃತ್ತ ಉಪನ್ಯಾಸಕ ಎಂ.ಆರ್. ಪ್ರಭು ಅಧ್ಯಕ್ಷತೆ ವಹಿಸಲಿದ್ದು, ಮನಪಾ ಸದಸ್ಯ ಬಿ. ಪ್ರಕಾಶ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಅಮೃತ ಕಾಲೇಜ್ ಆಫ್ ಎಜುಕೇಶನ್‌ನ ಪ್ರಾಂಶುಪಾಲ ಚಂದ್ರಹಾಸ ಜಿ. ಪಾಲ್ಗೊಳ್ಳಲಿದ್ದು, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಮಾತನಾಡಲಿದ್ದಾರೆ. ಮಕ್ಕಳ ಸಾಹಿತ್ಯ ಸಂಗಮದ ಸಾವಿತ್ರಿ ಎಸ್. ರಾವ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಗುವುದು.
ಅಪರಾಹ್ನ 12:15ಕ್ಕೆ ಶಿಕ್ಷ ಮುನಿರಾಜ ರೆಂಜಾಳರಿಂದ ‘ಏಕೀಕರಣದ ಹೆಜ್ಜೆಗುರುತುಗಳು’ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ. ಅಪರಾಹ್ನ 2ರಿಂದ ಸಮಾರೋಪ ಸಮಾರಂಭ ಜರಗಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಜಯಲಕ್ಷೀ ಬಿ. ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





