Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಾಪ್ ಸಿಂಹ ಅಸಹಾಯಕತೆ ವಿಷಾದಕರ :...

ಪ್ರತಾಪ್ ಸಿಂಹ ಅಸಹಾಯಕತೆ ವಿಷಾದಕರ : ಎಸ್‌ಡಿಪಿಐ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ21 March 2017 7:14 PM IST
share
ಪ್ರತಾಪ್ ಸಿಂಹ ಅಸಹಾಯಕತೆ ವಿಷಾದಕರ : ಎಸ್‌ಡಿಪಿಐ ವ್ಯಂಗ್ಯ

ಮಡಿಕೇರಿ, ಮಾ.21 :ಕೊಡಗು ಜಿಲ್ಲೆಯನ್ನು ನಿರಂತರವಾಗಿ ಮಾರಕ ರೋಗದ ರೀತಿಯಲ್ಲಿ ಕಾಡುತ್ತಿರುವ ಸೂಕ್ಷ್ಮ ಪರಿಸರ ವಲಯದ ಸಮಸ್ಯೆಯನ್ನು ತಮ್ಮ ಹೆಗಲಿಗೆ ಬಿಟ್ಟು ಬಿಡುವಂತೆ ಹೇಳಿಕೊಂಡಿದ್ದ ಸಂಸದ ಪ್ರತಾಪ ಸಿಂಹ ಅವರು ಇದೀಗ ಅಸಹಾಯಕತೆ ವ್ಯಕ್ತಪಡಿಸುತ್ತಿರುವುದು ವಿಷಾದಕರವೆಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕ ಟೀಕಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ಜನಪ್ರತಿನಿಧಿಗಳು ಸಂಸತ್ ಮತ್ತು ವಿಧಾನ ಸಭೆಯಲ್ಲಿ ಒತ್ತಡ ಹೇರಿ ಸಮಸ್ಯೆಯನ್ನು ಬಗೆಹರಿಸುವ ಬದಲು ರಸ್ತೆಗಿಳಿದು ಹೋರಾಟ ನಡೆಸುವ ಬಗ್ಗೆ ಎಚ್ಚರಿಕೆ ನೀಡುವುದು ಶೋಚನೀಯ ನಿರ್ಧಾರವಾಗಿದೆ ಎಂದು ಆರೋಪಿಸಿದರು. ಅಧಿಕಾರಕ್ಕೆ ಬರುವ ಮೊದಲು ಡಾ.ಕಸ್ತೂರಿ ರಂಗನ್ ವರದಿ ವಿರುದ್ಧ ಗ್ರಾಮ, ಗ್ರಾಮದಲ್ಲಿ ಹೋರಾಟ ನಡೆಸಿದ ಪಕ್ಷದಿಂದ ಗೆದ್ದು ಬಂದು ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಸಂಸದರು ಇದೀಗ ಅಸಹಾಯಕತೆ ವ್ಯಕ್ತಪಡಿಸುತ್ತಿರುವುದು ಸರಿಯಾದ ಕ್ರಮವಲ್ಲವೆಂದರು.

ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರ್ನಾಟಕ ರಾಜ್ಯದ ಪ್ರತಿನಿಧಿಗಳು ತೀವ್ರ ವಿರೋಧವನ್ನು ವ್ಯಕ್ತಪಡಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕೆ ಹೊರತು ಕ್ಷುಲ್ಲಕ ರಾಜಕಾರಣ ಮಾಡಬಾರದೆಂದರು. ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಿದ್ದರು ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸಿದೆ. ರಾಜ್ಯದಲ್ಲಿರುವ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸಿದ ಅಮೀನ್ ಮೊಹಿಸಿನ್ ಬಿಜೆಪಿ ಸಂಸದರಿರುವ ಪ್ರದೇಶದಲ್ಲೆ ಸೂಕ್ಷ್ಮ ಪರಿಸರ ವಲಯದ ಸಮಸ್ಯೆ ಗಂಭೀರತೆಯನ್ನು ಪಡೆದುಕೊಂಡಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಃಪತನದತ್ತ ಸಾಗುತ್ತಿದ್ದು, ಕೊಡಗಿನಲ್ಲಿ ಕಾಂಗ್ರೆಸಿಗರಿಂದಲೆ ಕಾಂಗ್ರೆಸ್ ಪಕ್ಷ ನಾಶವಾಗುತ್ತಿದೆಯೆಂದು ಆರೋಪಿಸಿದರು. ಮಡಿಕೇರಿ ನಗರಸಭೆೆಯಲ್ಲಷ್ಟೆ ಕಾಂಗ್ರೆಸ್ ಆಡಳಿತವಿದ್ದು, ಇದನ್ನು ಕೂಡ ಉಳಿಸಿಕೊಳ್ಳಲಾಗದ ಕಾಂಗ್ರೆಸ್ಸಿಗರು ನಗರಸಭೆಯ ಅಧಿಕಾರವನ್ನು ಕಳೆದುಕೊಳ್ಳುವ ಎಲ್ಲಾ ಸಾಧ್ಯತೆಗಳಿದೆ ಎಂದು ಭವಿಷ್ಯ ನುಡಿದರು.ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷ ನಾಲ್ಕು ಬಣಗಳಾಗಿ ಬೇರ್ಪಟ್ಟಿದ್ದು, ಅಧ್ಯಕ್ಷರ ಮೇಲೆ ಉಪಾಧ್ಯಕ್ಷರು ಹಲ್ಲೆಗೆ ಮುಂದಾದರು ಕಾಂಗ್ರೆಸ್ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಅಮಿನ್ ಮೊಹಿಸಿನ್ ಆರೋಪಿಸಿದರು.

ಸ್ಥಾಯಿ ಸಮಿತಿ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಕಾಂಗ್ರೆಸ್‌ನ ಕೆಲವು ಸದಸ್ಯರು ನಗರ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧವೇ ಹೇಳಿಕೆ ನೀಡಿದ್ದಾರೆ. ನಗರಸಭಾ ಅಧ್ಯಕ್ಷರನ್ನು ಕಾಂಗ್ರೆಸ್ಸಿಗರೆ ಕೆಳಕ್ಕಿಳಿಸುವ ಮುನ್ಸೂಚನೆ ದೊರೆತಿದ್ದು, ಪಕ್ಷ ಸರ್ವನಾಶದ ಅಂಚಿನಲ್ಲಿದೆಯೆಂದು ಆರೋಪಿಸಿದರು. ಅಭಿವೃದ್ಧಿಗೆ ಪೂರಕವಾದ ಹೋರಾಟಗಳನ್ನು ನಡೆಸುತ್ತಿರುವ ಎಸ್‌ಡಿಪಿಐನ್ನು ಬೆದರಿಕೆಯ ಮೂಲಕ ಮಣಿಸಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ ಅವರು, ಯುಜಿಡಿ ಚರಂಡಿಯ ಮೂಲಕ ಕೇಬಲ್ ಅಳವಡಿಸುತ್ತಿರುವವರಿಂದ ನಗರಸಭೆಗೆ ಬರಬೇಕಾದ ಆದಾಯವನ್ನು ಸಂಗ್ರಹಿಸಬೇಕೆಂದು ಅಮಿನ್ ಒತ್ತಾಯಿಸಿದರು.

ನಗರಸಭಾ ಸದಸ್ಯ ಮನ್ಸೂರ್ ಮಾತನಾಡಿ, ನಗರಸಭಾ ಉಪಾಧ್ಯಕ್ಷರು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕೆಂದು ಆಗ್ರಹಿಸಿದರು. ತೋಳ್ಬಲಕ್ಕೆ ಬೆದರುವುದಿಲ್ಲವೆಂದ ಅವರು, ವೈಯಕ್ತಿಕ ವಿಚಾರಗಳನ್ನು ಬಿಟ್ಟು ಜನಪರ ಕಾಳಜಿಯೊಂದಿಗೆ ಅಭಿವೃದ್ಧಿ ಪರ ಚಿಂತನೆಯನ್ನು ನಗರಸಭೆ ಕಂಡುಕೊಳ್ಳಬೇಕೆಂದು ಒತ್ತಾಯಿಸಿದರು.

ಸುರಭಿ ಹೋಟೆಲ್ ಬಳಿಯ ಇಂಟರ್ ಲಾಕ್‌ನ್ನು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತಿಯ ವಿಚಾರವನ್ನು ಎಳೆದು ತರಲಾಗಿದೆ. ಆದರೆ, ತಾವು ಎಂದೂ ಜಾತಿ ರಾಜಕಾರಣ ಮಾಡಿಲ್ಲ. ಇಷ್ಟು ವರ್ಷಗಳ ಕಾಲ ವಸತಿ ಮತ್ತು ಹಕ್ಕು ಪತ್ರವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದ ರಾಜರಾಜೇಶ್ವರಿ ನಗರದ ಬಡ ನಿವಾಸಿಗಳಿಗೆ ನಾನು ವಸತಿ ವ್ಯವಸ್ಥೆಯನ್ನು ಕಲ್ಪಿಸಿದ್ದೇನೆ. ಆದರೆ ಒಬ್ಬ ಮುಸ್ಲಿಮನಿಗೂ ಮನೆಯನ್ನು ನೀಡಿಲ್ಲ. ಜಾತಿ ಬಗ್ಗೆ ಟೀಕೆ ಮಾಡುವವರು ಇಷ್ಟು ವರ್ಷಗಳ ವರೆಗೆ ವಸತಿ ಸೌಲಭ್ಯವನ್ನು ಯಾಕೆ ದೊರಕಿಸಿಕೊಡಲಿಲ್ಲವೆಂದು ಮನ್ಸೂರ್ ಪ್ರಶ್ನಿಸಿದರು.

ಎಸ್‌ಡಿಪಿಐ ಸದಸ್ಯ ನೂರುದ್ದೀನ್ ಮಾತನಾಡಿ, ಕಳಪೆ ಎಂ ಸ್ಯಾಂಡ್‌ನಿಂದಾಗಿ ಮಹದೇವಪೆೇಟೆ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ನಡೆದಿರುವುದಾಗಿ ಆರೋಪಿಸಿದರು. ಇದಕ್ಕೆ ಮರಳಿನ ಕೊರತೆಯೇ ಕಾರಣವಾಗಿದ್ದು, ಜಿಲ್ಲಾಧಿಕಾರಿಗಳು ಮರಳಿನ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಜಿಲ್ಲಾಧಿಕಾರಿ ಹಠಾವೋ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್ ಮಾತನಾಡಿ, ಮಾ.25 ರಂದು ನಡೆಯವ ದಿಡ್ಡಳ್ಳಿ ಹೋರಾಟಕ್ಕೆ ಬೆಂಬಲ ಸೂಚಿಸುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ನಗರಾಧ್ಯಕ್ಷ ಕೆ.ಜೆ. ಪೀಟರ್ ಹಾಗೂ ನಗರಸಭಾ ಸದಸ್ಯರಾದ ನೀಮಾ ಅರ್ಷದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X