ಮಂಗಳೂರು ವಿ.ವಿ.ಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬಯೋಮೆಟ್ರಿಕ್ ಹಾಜರಾತಿ
ಮಂಗಳೂರು.ಮಾ,21:ಮುಂದಿನ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿಶ್ವ ವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಪನ್ಯಾಸಕರಿಗೆ ಬಯೋಮೆಟ್ರಿಕ್ ಮೂಲಕ ಹಾಜರಾತಿ ದಾಖಲು ಮಾಡಲಾಗುವುದು ಎಂದು ಕುಲಪತಿ ಕೆ.ಭೈರಪ್ಪ ತಿಳಿಸಿದ್ದಾರೆ.
ಅವರು ಇಂದು ಮಂಗಳೂರು ವಿ.ವಿ ಶೈಕ್ಷಣಿಕ ಮಂಡಳಿಯ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮುಂದಿನ ಹಂತದಲ್ಲಿ ಸಂಸ್ಥೆಯ ಘಟಕ ಕಾಲೇಜುಗಳಲ್ಲಿ ಈ ಪದ್ಧತಿಯನ್ನು ಅಳವಡಿಸಲಾಗುವುದು.ಹಂತವಾಗಿ ,ಹಂತವಾಗಿ ಉಳಿದ ಸಂಯೋಜಿತ ಕಾಲೇಜುಗಳಿಗೂ ವಿಸ್ತರಿಸಲಾಗುವುದು .ಇದರಿಂದ ವಿದ್ಯಾರ್ಥಿಗಳ ಹಾಜರಾತಿ ಸಮಸ್ಯೆಗಳು ಬಗೆಹರಿಯಬಹುದು.ಪಾರದರ್ಶಕ ಹಾಜರಾತಿ ವ್ಯವಸ್ಥೆ ಅಳವಡಿಸಿದಂತಾಗುತ್ತದೆ ಎಂದು ಭೈರಪ್ಪ ತಿಳಿಸಿದರು.ಮೂಲಭೂತ ಸೌಕರ್ಯಗಳಿಲ್ಲದ ಖಾಸಗಿ ಕಾಲೇಜುಗಳಲ್ಲಿ ಪ್ರಥಮವಾಗಿ ಮೂಲ ಭೂತ ಸೌಕರ್ಯ ಕಲ್ಪಿಸಲು ಸೂಚನೆ ನೀಡಲಾಗುವುದು.ಮುಂದಿನ ಹಂತದಲ್ಲಿ ಸರಕಾರಿ ಕಾಲೇಜುಗಳಲ್ಲಿ ಮೂಲ ಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನಕ್ಕಾಗಿ ಕ್ರಮ ಕೈ ಗೊಳ್ಳಲಾಗುವುದು ಎಂದು ಭೈರಪ್ಪ ತಿಳಿಸಿದ್ದಾರೆ.





