ದ್ವಿಚಕ್ರ ವಾಹನ ಢಿಕ್ಕಿ: ವಿದ್ಯಾರ್ಥಿ ಮೃತ್ಯು

ಮಂಗಳೂರು, ಮಾ.21: ದ್ವಿಚಕ್ರ ವಾಹನ ಸ್ಕಿಡ್ ಆಗಿ ಮಗುಚಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಳಸಗುರಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಅಡ್ಡೂರಿನ ಕಾಂಜಿಲಕೋಡಿ ನಿವಾಸಿ ಬಶೀರ್ ಎಂಬವರ ಪುತ್ರ ರಮೀಝ್ (18) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಕಾಲೇಜೊಂದರಲ್ಲಿ ಇಂಟೀರಿಯರ್ ಡಿಸೈನ್ ಕೋರ್ಸ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ದ್ವಿಚಕ್ರ ವಾಹನ ಚಾಲಕ ತೌಫೀಕ್ ಎಂಬವರು ಗಾಯಗೊಂಡಿದ್ದಾರೆ.
ರಮೀಝ್ ದ್ವಿಚಕ್ರ ವಾಹನದಲ್ಲಿ ತೌಫೀಕ್‌ರೊಂದಿಗೆ ಪೊಳಲಿಯಿಂದ ಕಾಂಜಿಲಕೋಡಿಗೆ ತೆರಳುತ್ತಿದ್ದಾಗ ಕಳಸಗುರಿ ಎಂಬಲ್ಲಿ ಚಾಲಕ ತೌಫೀಕ್‌ನ ನಿಯಂತ್ರಣವನ್ನು ಕಳೆದುಕೊಂಡು ಮಗುಚಿ ಬಿದ್ದಿದೆ ಎನ್ನಲಾಗಿದೆ. ಪರಿಣಾಮವಾಗಿ ದ್ವಿಚಕ್ರ ವಾಹನವು ಅದೇ ರಸ್ತೆಯಲ್ಲಿ ಬರುತ್ತಿದ್ದ ಇನ್ನೊಂದು ವಾಹನಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ರಮೀಝ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





