ನಮ್ಮ ಪ್ರಸ್ತಾವ ಒಪ್ಪಿಕೊಳ್ಳಿ, ಇಲ್ಲದಿದ್ದರೆ ಮಂದಿರ ನಿರ್ಮಾಣಕ್ಕೆ ನಾವು ಕಾನೂನು ತರುತ್ತೇವೆ: ಸುಬ್ರಮಣಿಯನ್ ಸ್ವಾಮಿ

ಹೊಸದಿಲ್ಲಿ,ಮಾ.22: ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ಮುಸ್ಲಿಂ ನಿಯೋಗವು ಸರಯೂ ನದಿಗೆ ಅಡ್ಡವಾಗಿ ಮಸೀದಿ ನಿರ್ಮಾಣದ ನಮ್ಮ ಪ್ರಸ್ತಾವವನ್ನು ಒಪ್ಪಿಕೊಳ್ಳಬೇಕು, ಇಲ್ಲದಿದ್ದರೆ 2018ರಲ್ಲಿ ರಾಜ್ಯಸಭೆಯಲ್ಲಿ ಬಿಜೆಪಿಗೆ ಬಹುಮತ ದೊರಕಿದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಅದು ಕಾನೂನೊಂದನ್ನು ತರಲಿದೆ ಎಂದು ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಇಲ್ಲಿ ಹೇಳಿದ್ದಾರೆ.
ಅಯೋಧ್ಯೆ ವಿವಾದವನ್ನು ನ್ಯಾಯಾಲಯದ ಹೊರಗೆ ಸೌಹಾರ್ದ ಮಾತುಕತೆಗಳ ಮೂಲಕ ಇತ್ಯರ್ಥಗೊಳಿಸಿಕೊಳ್ಳುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಹಿಂದು ಮತ್ತು ಮುಸ್ಲಿಂ ಸಮುದಾಯಗಳಿಗೆ ಕಿವಿಮಾತು ಹೇಳಿತ್ತು.
Next Story





