ಕಮಲದ ಕೈಹಿಡಿದ ಕೃಷ್ಣ
.jpg)
ಹೊಸದಿಲ್ಲಿ, ಮಾ.22: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದ ಗೌಡ, ಕರ್ನಾಟಕದ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಸಮ್ಮುಖದಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಕೃಷ್ಣ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದರು.
ಕಾಂಗ್ರೆಸ್ ಪಕ್ಷದಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದ ಹಿರಿಯ ಮುಖಂಡ ಕೃಷ್ಣ ಆ ಪಕ್ಷವನ್ನು ತೊರೆದು ಕಮಲದ ತೆಕ್ಕೆಗೆ ಸೇರಿದ್ದಾರೆ. ಯಾವ ಕಾರಣಕ್ಕಾಗಿ ಅವರು ಕಾಂಗ್ರೆಸ್ ತೊರೆದಿದ್ದಾರೆಂದು ಇನ್ನೂ ಬಹಿರಂಗಪಡಿಸಿಲ್ಲ. ಕುಟುಂಬದ ಹಿತಾಸಕ್ತಿಗಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ಪರವಾಗಿ ಕೃಷ್ಣರನ್ನು ಸ್ವಾಗತಿಸುತ್ತೇನೆೆ. ಅವರು ರಾಜಕೀಯ ಆಸ್ತಿಯಿದ್ದಂತೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರತಿಕ್ರಿಯಿಸಿದರು.
Next Story





