Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ವಾರ್ತಾಭಾರತಿವಾರ್ತಾಭಾರತಿ23 March 2017 7:07 PM IST
share
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮಡಿಕೇರಿ ಮಾ.23: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಡಿಕೇರಿ ನಗರದ ಕನ್ನಂಡಬಾಣೆ ಬಡಾವಣೆಯಲ್ಲಿ ನಡೆದಿದೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಬಂದ ದುಷ್ಕರ್ಮಿಗಳು ಈ ದುಷ್ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಂಡಬಾಣೆ ನಿವಾಸಿ ಗೋಕುಲ್ ಎಂಬಾತನೇ ಮೃತ ಯುವಕನಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮುಂಡೇಶ್ವರಿ ನಗರದ ನಿವಾಸಿ ಕಾರ್ತಿಕ್ ಎಂಬಾತನನ್ನು ಬಂಧಿಸಲಾಗಿದೆ.

ರಾತ್ರಿ ತನ್ನ ಮನೆಯತ್ತ ಬೈಕ್‌ನಲ್ಲಿ ತೆರಳುತ್ತಿದ್ದ ಗೋಕುಲ್ ಮೇಲೆ ಆಟೋರಿಕ್ಷಾದಲ್ಲಿ ಬಂದಿದ್ದ ಹಂತಕರ ತಂಡ ಏಕಾಏಕಿ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಹಲ್ಲೆಯಿಂದ ಗೋಕುಲ್‌ನ ಕುತ್ತಿಗೆ ಹಾಗೂ ಎದೆ ಭಾಗಕ್ಕೆ ತೀವ್ರ ಗಾಯಗಳಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸಂದರ್ಭ ಕಾರ್ತಿಕ್ ಚಾಮುಂಡೇಶ್ವರಿ ನಗರದ ಗಿಡಗಳ ನಡುವೆ ಬಚ್ಚಿಟ್ಟುಕೊಂಡಿರುವುದು ಕಂಡು ಬಂತು. ಗುರುವಾರ ನಸುಕು 4 ಗಂಟೆ ವೇಳೆಗೆ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾದರು.

 ಕೆಲವು ದಿನಗಳ ಹಿಂದೆ ಯುವಕರ ಎರಡು ಗುಂಪುಗಳ ನಡುವೆ ನಡೆದಿದ್ದ ಕಲಹದ ವೈಷಮ್ಯವೇ ಕೊಲೆಗೆ ಕಾರಣವೆಂದು ಹೇಳಲಾಗಿದೆ.
 ಕೊಲೆಯಾದ 50 ಮೀಟರ್ ದೂರದಲ್ಲಿ ಕೆ.ಎ.12 ಎ.6526 ಸಂಖ್ಯೆಯ ಆಟೋರಿಕ್ಷಾವೊಂದು ಪತ್ತೆಯಾಗಿದೆ. ಇದರಲ್ಲಿ ರಕ್ತದ ಕಲೆಗಳು ಗೋಚರಿಸಿದ್ದು, ಹಂತಕರು ಕೊಲೆಗೆ ಇದೇ ಆಟೋವನ್ನು ಬಳಸಿರಬಹುದು ಎಂದು ಶಂಕಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಘಟನೆ ಸ್ಥಳಕ್ಕೆ ಭೇಟಿ ನೀಡಿದರು. ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.  ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕೃತ್ಯದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ನಗರದಲ್ಲಿ ನೈಟ್ ಬೀಟ್ ಕೊರತೆ:

ಮಡಿಕೇರಿ ನಗರದಲ್ಲಿ ಪೊಲೀಸರು ನೈಟ್‌ಬೀಟ್ ಮಾಡುತ್ತಿಲ್ಲವೆಂದು ಆರೋಪಿಸಿರುವ ಸಾರ್ವಜನಿಕರು, ಮುಖ್ಯ ರಸ್ತೆಗಳಲ್ಲಿ ಮಾತ್ರ ಕಾಣಿಸಿಕೊಳ್ಳುವ ಸಿಬ್ಬಂದಿ ನಿರ್ಜನ ಪ್ರದೇಶದಲ್ಲಿ ಸಂಚರಿಸದೆ ಇರುವುದೇ ಈ ರೀತಿಯ ಘಟನೆಗಳಿಗೆ ಕಾರಣವೆಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಯುವಕರ ಗುಂಪುಗಳು ರಾತ್ರಿ ವೇಳೆಯಲ್ಲಿ ಮದ್ಯಪಾನ ಹಾಗೂ ಮಾದಕ ವಸ್ತುಗಳನ್ನು ಸೇವಿಸಿ ಪ್ರಚೋದನಾಕಾರಿಯಾಗಿ ನಡೆದುಕೊಳ್ಳುತ್ತಿರುವುದಲ್ಲದೆ ಗುಂಪು ಘರ್ಷಣೆಯಲ್ಲೂ ತೊಡಗುತ್ತಿರುವ ಬೆಳವಣಿಗೆ ಕಂಡು ಬಂದಿದೆ. ಪೊಲೀಸರು ನಿರ್ಜನ ಬಡಾವಣೆಗಳಲ್ಲೂ ರಾತ್ರಿ ಭೇಟಿ ಮಾಡಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X