Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ ಯುವಕನ ಅಪಹರಣ ಪ್ರಕರಣದ ಪ್ರಮುಖ...

ವಿಟ್ಲ ಯುವಕನ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಜೋಗಿ ಹನೀಫ್ ಬಂಧನ

ವಾರ್ತಾಭಾರತಿವಾರ್ತಾಭಾರತಿ23 March 2017 8:25 PM IST
share
ವಿಟ್ಲ ಯುವಕನ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಜೋಗಿ ಹನೀಫ್ ಬಂಧನ

ಬಂಟ್ವಾಳ, ಮಾ. 23: ವಿಟ್ಲದ ಯುವಕನೋರ್ವನನ್ನು ಕಾರಿನಲ್ಲಿ ಅಪಹರಿಸಿ ಚೂರಿಯಿಂದ ಚುಚ್ಚಿ ಗಾಯಗೊಳಿಸಿದ್ದಲ್ಲದೆ ಸಾವಿರಾರು ರೂಪಾಯಿ ದರೋಡೆ ನಡೆಸಿ ಬಿಡುಗಡೆಗೆ ಲಕ್ಷಾಂತರ ರೂಪಾಯಿ ಬೇಡಿಕೆ ಇಟ್ಟ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೇಪು ಗ್ರಾಮದ ನೀರ್ಕಜೆ ಕುಕ್ಕೆಬೆಟ್ಟು ನಿವಾಸಿ ಹನೀಫ್ ಯಾನೆ ಜೋಗಿ ಹನೀಫ್(36) ಬಂಧಿತ ಆರೋಪಿ. ಈತ ಹಾಗೂ ಇತರ ಇಬ್ಬರು ಸೇರಿ ಮಾ. 19ರಂದು ರಾತ್ರಿ ವಿಟ್ಲ ಕಸ್ಬಾ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ್ದರು.

ರಝಾಕ್ ತನ್ನ ಸ್ನೇಹಿತ ಮನ್ಸೂರು ಎಂಬಾತನ ಬೈಕ್‌ನಲ್ಲಿ ವಿಟ್ಲದಿಂದ ಒಕ್ಕೆತ್ತೂರಿಗೆ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರ ತಂಡ ರಝಾಕ್‌ನಲ್ಲಿ ಅಪಹರಿಸಿತ್ತು. ಕೂಡಲೇ ಮನ್ಸೂರು ನೀಡಿದ ಮಾಹಿತಿಯಂತೆ ವಿಟ್ಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದರು.

ಈ ಮಧ್ಯೆ ಅಪಹರಣಕಾರರು ರಝಾಕ್‌ಗೆ ಕೋಳಿ ಅಂಕಕ್ಕೆ ಬಳಸುವ ಚೂರಿಯಿಂದ ಚುಚ್ಚಿ ಗಾಯಗೊಳಿಸಿದ್ದರಲ್ಲದೆ ರಝಾಕ್ ಬಳಿಯಿದ್ದ 10 ಸಾವಿರ ರೂ. ನಗದು, ಮೊಬೈಲ್ ಫೋನ್ ದರೋಡೆ ನಡೆಸಿದ್ದರು. ಅಲ್ಲದೆ ಬಿಡುಗಡೆ ಮಾಡಲು 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಪೊಲೀಸರ ಕಾರ್ಯಾಚರಣೆಯ ಮಾಹಿತಿ ಅರಿತ ಅಪಹರಣಕಾರರು ರಝಾಕ್‌ನನ್ನು ದೇರಳಕಟ್ಟೆಯಲ್ಲಿ ಕಾರಿನಿಂದ ಇಳಿಸಿ ಪರಾರಿಯಾಗಿದ್ದರು.

ಮನ್ಸೂರು ನೀಡಿದ ದೂರು ದಾಖಲಿಸಿದ್ದ ವಿಟ್ಲ ಠಾಣೆ ಪೊಲೀಸರು ಅಪಹರಣಕಾರರ ಬಂಧನಕ್ಕೆ ಬಲೆ ಬೀಸಿದ್ದರು. ಪ್ರಕರಣದ ಪ್ರಮುಖ ಆರೋಪಿ ಹನೀಫ್ ಯಾನೆ ಜೋಗಿ ಹನೀಫ್ ಇಂದು ಕೊಡಪದವು ಬಸ್ ನಿಲ್ದಾಣದ ಬಳಿ ಇರುವ ಬಗ್ಗೆ ಪಡೆದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.ಆತನಿಂದ ರಝಾಕ್‌ನ ಮೊಬೈಲ್ ಫೋನ್, 4 ಸಾವಿರ ರೂ. ನಗದು, ಹಲ್ಲೆ ನಡೆಸಿದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿ ಹನೀಫ್ ಗಾಂಜಾ ದಂಧೆಯಲ್ಲಿ ತೊಡಗಿದವನಾಗಿದ್ದು ಈತನ ಮೇಲೆ ಗಾಂಜಾ ಮಾರಾಟ, ಸೇವನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್‌ಗಳಿವೆ. ಅಲ್ಲದೆ ಹಲ್ಲೆ ಸೇರಿದಂತೆ ಇತರ ಹಲವು ಪ್ರಕರಣಗಳು ಈತನ ಮೇಲಿದ್ದು ವಿಟ್ಲ ಪೊಲೀಸ್ ಠಾಣೆಯ ರೌಡಿ ಶೀಟರ್ ಕೂಡಾ ಆಗಿದ್ದಾನೆ.

ಅಪಹರಣ ಪ್ರಕರಣದಲ್ಲಿ ಭಾಗಿಯಾದ ಹನೀಫ್‌ನ ಇನ್ನಿಬ್ಬರು ಸಹಚರರು ತಲೆ ಮರೆಸಿಕೊಂಡಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ .ಜಿ. ಬೊರಸೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಮಾರ್ಗದರ್ಶನದಂತೆ ಬಂಟ್ವಾಳ ಡಿವೈಎಸ್ಪಿ ಡಾ. ರವೀಶ್ ಸಿ.ಆರ್. ನೇತೃತ್ವದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಬಿ.ಕೆ.ಮಂಜಯ್ಯ, ವಿಟ್ಲ ಎಸ್ಸೈ ನಾಗರಾಜ್ ಎಚ್.ಇ., ಸಿಬ್ಬಂದಿ ಬಾಲಕೃಷ್ಣ ಗೌಡ, ಪ್ರವೀಣ್ ರೈ, ರಕ್ಷಿತ್ ರೈ, ಲೋಕೇಶ್, ಪ್ರವೀಣ್ ಕುಮಾರ್, ವೃತ್ತ ನಿರೀಕ್ಷಕರ ಕಚೇರಿಯ ಗಿರೀಶ್ ಹಾಗೂ ಚಾಲಕರಾದ ರಘು ರಾಮ, ವಿಜಯೇಶ್ವರ ಬಂಧನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X