Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳೆಗಾರರ ಗಾಯದ ಮೇಲೆ ಬರೆ ಎಳೆದ ಬರ

ಬೆಳೆಗಾರರ ಗಾಯದ ಮೇಲೆ ಬರೆ ಎಳೆದ ಬರ

ಕಾಫಿ ಜೊತೆಗೆ ಮೆಣಸಿನ ಬೆಳೆಗೂ ಆಪತ್ತು

ವಾರ್ತಾಭಾರತಿವಾರ್ತಾಭಾರತಿ24 March 2017 11:07 PM IST
share
ಬೆಳೆಗಾರರ ಗಾಯದ ಮೇಲೆ ಬರೆ ಎಳೆದ ಬರ

ಚಿಕ್ಕಮಗಳೂರು, ಮಾ.24: ಮಲೆನಾಡಿನಲ್ಲಿ ಎದುರಾಗಿರುವ ಭೀಕರ ಬರಗಾಲ ಕಾಫಿ ಬೆಳೆಗಾರರ ಗಾಯದ ಮೇಲೆ ಬರೆ ಎಳೆದಿದೆ. ಬೆಳೆಗಾರರು ಕಾಫಿಯನ್ನು ನೆಚ್ಚಿಕೊಂಡಿದ್ದರೂ ಕಪ್ಪು ವಜ್ರ ಖ್ಯಾತಿಯ ಕಾಳುಮೆಣಸನ್ನು ಪರ್ಯಾಯ ಉಪಬೆಳೆಯಾಗಿ ಆಶ್ರಯಿಸಿದ್ದಾರೆ.


ಈ ಎರಡೂ ಬೆಳೆಗಳಲ್ಲಿ ಒಂದಾದರೂ ಆಪತ್ ಕಾಲದಲ್ಲಿ ಕೈಹಿಡಿಯಬಹುದು ಎನ್ನುವ ಆಲೋಚನೆ ಬೆಳೆಗಾರರಲ್ಲಿತ್ತು. ಮಳೆ ಇಲ್ಲದೆ ನೀರಿನ ಅಭಾವದಿಂದ ಮಲೆನಾಡು ಸುತ್ತಮುತ್ತಲ ಪ್ರದೇಶದಲ್ಲಿ ವಾಣಿಜ್ಯ ಬೆಳೆಗಳಾದ ಅಡಿಕೆ, ಕಾಳುಮೆಣಸು, ಕಾಫಿ, ತೆಂಗು ಸೇರಿದಂತೆ ಎಲ್ಲ ಬೆಳೆಯೂ ಸಂಪೂರ್ಣ ನೆಲಕಚ್ಚಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾಡಿಕೆಯಂತೆ ಮಳೆಯಾಗುತ್ತಿಲ್ಲ.

ಹೀಗಾಗಿ ಇತಿಹಾಸದಲ್ಲಿ ಕಂಡು-ಕೇಳರಿಯದ ಬರದಿಂದ ಮೆಣಸಿನ ಬೆಳೆಗೂ ರೋಗಬಾಧೆ ಉಂಟಾಗಿದೆ. ಕಾಳು ಮೆಣಸಿಗೆ ಸದ್ಯ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 600 ರೂ.ಬೆಲೆ ಇದೆ. ಕಪ್ಪುವಜ್ರಕ್ಕೆ ಕಳ್ಳ-ಕಾಕರ ಕಾಟವೂ ಹೆಚ್ಚಿದ್ದು,ಇದರಿಂದಾಗಿ ಕೆಲ ಬೆಳೆಗಾರರು ಇರುವ ಬೆಳೆಯನ್ನೇ ಉಳಿಸಿಕೊಳ್ಳಲಾಗುತ್ತಿಲ್ಲ.ಮಳೆ ಇಲ್ಲದೆ ಶೇ.50-60ರಷ್ಟು ಬೆಳೆ ಹಾಳಾಗಿದ್ದರೆ, ಅಳಿದುಳಿದ ಬೆಳೆಗಳು ಬಿಸಿಲ ಬೇಗೆಗೆ ನೆಲಕ್ಕೆ ಉದುರುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಧ್ಯ ಪ್ರವೇಶಿಸಿ ಸಮರ್ಪಕ ಬೆಳೆ ನಷ್ಟ ಪರಿಹಾರ ನೀಡುವಂತೆ ಬೆಳೆಗಾರರು ಆಗ್ರಹಿಸುತ್ತಿದ್ದಾರೆ.


 ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 56,995 ಹೆಕ್ಟೇರ್ ಭೂಮಿಯಲ್ಲಿ ಅರೇಬಿಕಾ ಮತ್ತು 31,565 ಹೆಕ್ಟೇರ್‌ನಷ್ಟು ಭೂಮಿಯಲ್ಲಿ ರೋಬೋಸ್ಟಾ ಬೆಳೆಯಲಾಗಿದೆ. ಅಷ್ಟು ಪ್ರದೇಶದಲ್ಲೂ ಪರ್ಯಾಯ ಉಪಬೆಳೆಯಾಗಿ ಮೆಣಸನ್ನು ಬೆಳೆಯಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾಫಿ ದರದ ಮೇಲೆ ನಡೆಯುವ ಕಣ್ಣಾಮುಚ್ಚಾಲೆ ಆಟದಿಂದ ಬೆಳೆಗಾರರು ಕಾಫಿಗೆ ಕೊಡುವಷ್ಟೆ ಪ್ರಾಮುಖ್ಯತೆಯನ್ನು ಕಾಳು ಮೆಣಸಿನ ಬೆಳೆಗೂ ಕೊಡುತ್ತಾರೆ.

ಈ ಬಾರಿಯ ಭೀಕರ ಬರಗಾಲದ ಪರಿಣಾಮದಿಂದ ಕಾಫಿ ಹಾಗೂ ಮೆಣಸು ಎರಡೂ ಬೆಳೆಗಳು ಸಂಪೂರ್ಣ ನೆಲಕಚ್ಚುತ್ತಿವೆ. ಇದರಿಂದ ಬೆಳೆಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ನೀರಿನ ಸಮಸ್ಯೆಯಿಂದ ಮೆಣಸಿನ ಬಳ್ಳಿಗಳೇ ಒಣಗಿ ಕೆಲವೆಡೆ ಹೂಗಳು ಮಣ್ಣು ಪಾಲಾಗುತ್ತಿವೆ. ಈ ವರ್ಷ ಸಮೃದ್ಧ ಮಳೆ ಬಂದರೂ ಮುಂದಿನ ಎರಡು ವರ್ಷ ಕಾಫಿ ಹಾಗೂ ಮೆಣಸು ಬೆಳೆ ಫಸಲು ಬರಲು ಸಾದ್ಯವಿಲ್ಲ.

ಮಹೇಶ್, ಕಾಳು ಮೆಣಸಿನ ಬೆಳೆಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X