ಸಂದೀಪ್ ವಾಗ್ಲೆಗೆ ಪ.ಗೋ.ಪ್ರಶಸ್ತಿ

ಮಂಗಳೂರು, ಮಾ.25: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ 2016ನೆ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಕನ್ನಡಪ್ರಭ ಪತ್ರಿಕೆಯ ಹಿರಿಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.
2016ರ ಜು.26ರಂದು ಕನ್ನಡ ಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ‘ನಾಡಿಗೆ ಬಂದು ಸೊರಗಿದ ಕೊರಗರು’ ಎಂಬ ಅವರ ಈ ವರದಿಗೆ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿಯು 10,001 ರೂ. ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





