ರೋಟರಿ ವಾರ್ಷಿಕ ವಂದನಾ ಪ್ರಶಸ್ತಿ ಪ್ರದಾನ

ಮಂಗಳೂರು, ಮಾ.24: ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಜಯರಾಮ್ ಭಟ್ ಮತ್ತು ಪತ್ರಕರ್ತ ಮನೋಹರ್ ಪ್ರಸಾದ್‌ರಿಗೆ ರೋಟರಿ ಕ್ಲಬ್ ಮಂಗಳೂರು ಸೆೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಗಳ ರಾಜ್ಯಮಟ್ಟದ ವಂದನಾ ಪ್ರಶಸ್ತಿಯನ್ನು ಶುಕ್ರವಾರ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಸಾಧಕರನ್ನು ಗುರುತಿಸಿ ಗೌರವಿಸುವುದು ಒಳ್ಳೆಯ ಕಾರ್ಯ ಎಂದು ಹೇಳಿದರು.
ಮೇಯರ್ ಕವಿತಾ ಸನಿಲ್, ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಡಾ. ದೇವದಾಸ್ ರೈ, ಡಾ. ನಂದಕಿಶೋರ್ ರಾವ್, ಕೆ.ಎಂ. ಹೆಗ್ಡೆ ಉಪಸ್ಥಿತರಿದ್ದರು.
ರೋಟರಿ ಸಂಸ್ಥೆಯ ಅಧ್ಯಕ್ಷ ಅನಿಲ್ ಗೊನ್ಸಾಲಿಸ್ ಸ್ವಾಗತಿಸಿದರು. ರೋಟರಿ ವಲಯ ಅಧಿಕಾರಿ ಇಲ್ಯಾಸ್ ಸ್ಯಾಂಕ್ಟಿಸ್ ರೋಟರಿ ಸಂಸ್ಥೆಯ ಸಾಪ್ತಾಹಿಕ ಪತ್ರಿಕೆ ‘ಸೆಂಟೋರ್’ ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ರೇಮಂಡ್ ಡಿ.ಕುನ್ಹ, ರೋಟರ್ಯಾಕ್ಟ್ ಸಂಸ್ಥೆಯ ಅಧ್ಯಕ್ಷ ಯತೀಶ್ ಸಾಲ್ಯಾನ್ ಉಪಸ್ಥಿತರಿದ್ದರು.
ರೋಟರ್ಯಾಕ್ಟ್ ಸಂಸ್ಥೆಯ ಕಾರ್ಯದರ್ಶಿ ಶಿವಪ್ರಸಾದ್ ವಂದಿಸಿದರು. ನೀತೀನ್ ಶೆಟ್ಟಿ ಮತ್ತು ಆರ್. ಎಸ್. ಶೆಟ್ಟಿಯಾನ್ ಕಾರ್ಯಕ್ರಮ ನಿರೂಪಿಸಿದರು.







