Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಗೆ ತೀವ್ರ ಮುಖಭಂಗ

ಟ್ರಂಪ್ ಗೆ ತೀವ್ರ ಮುಖಭಂಗ

►‘ಒಬಾಮಕೇರ್’ ರದ್ದುಪಡಿಸುವ ಟ್ರಂಪ್ ಯತ್ನ ವಿಫಲ ►ಆಡಳಿತಾರೂಢ ರಿಪಬ್ಲಿಕನ್ ಸಂಸದರಿಂದಲೇ ಮಸೂದೆಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ25 March 2017 6:56 PM IST
share
ಟ್ರಂಪ್ ಗೆ ತೀವ್ರ ಮುಖಭಂಗ

ವಾಶಿಂಗ್ಟನ್, ಮಾ. 25: ಅಮೆರಿಕದ ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ‘ಒಬಾಮಕೇರ್’ ಯೋಜನೆಯನ್ನು ರದ್ದುಪಡಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮಹತ್ವಾಕಾಂಕ್ಷೆಯ ಪ್ರಯತ್ನಗಳಿಗೆ ಶುಕ್ರವಾರ ತೀವ್ರ ಹಿನ್ನಡೆಯುಂಟಾಗಿದೆ.

ಒಬಾಮಕೇರ್ ಮಸೂದೆಯನ್ನು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಿಂದ ಹಿಂದಕ್ಕೆ ಪಡೆಯಬೇಕಾದ ಅನಿವಾರ್ಯತೆಗೆ ಸರಕಾರ ಸಿಲುಕಿದ್ದು, ಟ್ರಂಪ್ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಆಡಳಿತಾರೂಢ ರಿಪಬ್ಲಿಕನ್ ಪಕ್ಷದ ನಿಯಂತ್ರಣದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ನೂತನ ಆರೋಗ್ಯ ಮಸೂದೆಯನ್ನು ಅಂಗೀಕರಿಸಲು ಅಗತ್ಯವಾದ ಮತಗಳನ್ನು ಕ್ರೋಢೀಕರಿಸಲು ಸ್ಪೀಕರ್ ಪೌಲ್ ರಯಾನ್ ವಿಫಲರಾದರು. ಇದಕ್ಕೆ ಸ್ವತಃ ಆಡಳಿತಾರೂಢ ರಿಪಬ್ಲಿಕನ್ ಪಕ್ಷದ ಕೆಲವು ಸಂಸದರ ವಿರೋಧವೇ ಕಾರಣವಾಗಿದೆ. ಆ ಪಕ್ಷದ ಕೆಲವು ಸಂಸದರು ‘ಫ್ರೀಡಂ ಕಾಕಸ್’ ಎಂಬ ಬ್ಯಾನರ್‌ನಲ್ಲಿ ಗುಂಪು ರಚಿಸಿಕೊಂಡು ಮಸೂದೆಯ ವಿರುದ್ಧವಾಗಿ ಕಾರ್ಯಾಚರಿಸಿದರು.

ಅಮೆರಿಕದ ಕೆಳಮನೆ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ಒಟ್ಟು ಸದಸ್ಯರ ಸಂಖ್ಯೆ 435. ಇಲ್ಲಿ ರಿಪಬ್ಲಿಕನ್ ಪಕ್ಷ 235 ಸದಸ್ಯರೊಂದಿಗೆ ಸರಳ ಬಹುಮತವನ್ನು ಹೊಂದಿದೆ.

ಆದರೆ, ಟ್ರಂಪ್ ಪರವಾಗಿ ಮಸೂದೆಯನ್ನು ಮಂಡಿಸುವ ಹೊಣೆಯನ್ನು ಹೊತ್ತಿದ್ದ ರಯಾನ್‌ಗೆ 215 ಮತಗಳನ್ನು ಮಾತ್ರ ಕಲೆ ಹಾಕಲು ಸಾಧ್ಯವಾಯಿತು.

ಭಾರತದಲ್ಲಿರುವಂತೆ ಅಮೆರಿಕದಲ್ಲಿ ಪಕ್ಷಾಂತರ ವಿರೋಧಿ ಕಾನೂನು ಇಲ್ಲ. ಹಾಗಾಗಿ, ಅಲ್ಲಿನ ಸಂಸದರು ತಮಗೆ ಸರಿಕಂಡಂತೆ ಮತ ಹಾಕಬಹುದು, ಪಕ್ಷದ ನಾಯಕತ್ವದ ಸೂಚನೆಯಂತೆ ಮತ ಹಾಕಬೇಕಿಲ್ಲ.

ಕೆಟ್ಟ ದಿನಗಳು ಬರಲಿವೆ: ಟ್ರಂಪ್

ತನ್ನ ಮಸೂದೆಯ ವೈಫಲ್ಯಕ್ಕೆ ಪ್ರತಿಪಕ್ಷ ಡೆಮಾಕ್ರಟಿಕ್ ಸಂಸದರ ವಿರೋಧವೇ ಕಾರಣ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಳಿಕ ದೂರಿದ್ದಾರೆ ಹಾಗೂ ಒಬಾಮಕೇರ್ ಮುಂದುವರಿಯಲಿದ್ದು, ಜನರ ವಿಮಾ ಪ್ರೀಮಿಯಂ ಮೊತ್ತ ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.

‘‘ಅದು ಹಾಗೆಯೇ ಆಗುತ್ತದೆ. ಇಲ್ಲಿ ನೀವು ಮಾಡುವಂತಾದ್ದು ಹೆಚ್ಚೇನೂ ಇಲ್ಲ. ಕೆಟ್ಟ ಬೆಳವಣಿಗೆಗಳು ಇನ್ನು ಮುಂದೆ ನಡೆಯಲಿವೆ. ನಾನು ಇದನ್ನು ಒಂದೂವರೆ ವರ್ಷದಿಂದ ಹೇಳುತ್ತಾ ಬಂದಿದ್ದೇನೆ. ಅದನ್ನು ನಿರ್ವಹಣೆ ಮಾಡಲು ಸಾಧ್ಯವಿಲ್ಲ. ಆದರೆ, ಇದಕ್ಕೆ ಪರಿಹಾರವಿಲ್ಲ’’ ಎಂದು ಮಸೂದೆಯನ್ನು ಹಿಂದಕ್ಕೆ ಪಡೆದ ಬಳಿಕ ಶ್ವೇತಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಟ್ರಂಪ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X