Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಜಿಕಲ್ ದಾಳಿ: ಹುಳುಕುಗಳೇನು ಗೊತ್ತೇ?

ಸರ್ಜಿಕಲ್ ದಾಳಿ: ಹುಳುಕುಗಳೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ26 March 2017 9:15 AM IST
share
ಸರ್ಜಿಕಲ್ ದಾಳಿ: ಹುಳುಕುಗಳೇನು ಗೊತ್ತೇ?

ಹೊಸದಿಲ್ಲಿ, ಮಾ.26: ಪಾಕಿಸ್ತಾನದ ಆಯಕಟ್ಟಿನ ಪ್ರದೇಶದ ಉಗ್ರರ ತಾಣಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬಗ್ಗೆ ಬೀಗುತ್ತಿದ್ದ ಕೇಂದ್ರ ಸರ್ಕಾರಕ್ಕೆ, ದಾಳಿಯಲ್ಲಿನ ಲೋಪಗಳು ಮುಜುಗರ ತಂದಿವೆ. ಸೇನೆಯ ಹೆಲಿಕಾಪ್ಟರ್ ಘಟಕಗಳು ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜಿತರಾಗಿದ್ದ ಸೈನಿಕರ ನಡುವಿನ ಸಂವಹನ ವ್ಯವಸ್ಥೆ ಕಳಪೆಯಾಗಿದ್ದರಿಂದ ವಾಯುದಾಳಿಯಲ್ಲಿ ವಾಯುಪಡೆ ಆಸ್ತಿಗಳನ್ನು ಗರಿಷ್ಠ ಸಾಮರ್ಥ್ಯಕ್ಕೆ ಅನುಗುಣವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ ಎನ್ನುವುದು ಇದೀಗ ಬಹಿರಂಗವಾಗಿದೆ.

ವಾಯುಪ್ರದೇಶದಿಂದ ನೆಲಮಟ್ಟಕ್ಕೆ ಸಂವಹನ ವ್ಯವಸ್ಥೆ ವಿಶ್ವಾಸಾರ್ಹ ಮಟ್ಟದಲ್ಲಿ ಇಲ್ಲದ ಕಾರಣ, ಪೈಲಟ್‌ಗಳು ಕೊನೆಕ್ಷಣದಲ್ಲಿ ಯುದ್ಧ ಯೋಜನೆಗಳಲ್ಲಿ, ದಾಳಿಯಲ್ಲಿ ಬಲಿಯಾಗುವ ಸೈನಿಕರ ಸಾಗಾಟ ಅಥವಾ ಮುಂದಿನ ಸಾಲಿನಲ್ಲಿ ನಿಂತಿರುವ ಪಡೆಯ ಗುರುತಿಸುವಿಕೆ ಮತ್ತಿತರ ಪ್ರಮುಖ ರಣತಂತ್ರಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಯಿತು ಎನ್ನುವುದನ್ನು ಸೇನಾ ವಿನ್ಯಾಸ ಬ್ಯೂರೊ (ಎಡಿಬಿ) ವರದಿ ಬೆಳಕಿಗೆ ತಂದಿದೆ.

ಸೇನೆಯ ಯಾನದ ಹೆಲಿಕಾಪ್ಟರ್ ಹಾಗೂ ನೆಲಮಟ್ಟದ ಪಡೆಗಳ ನಡುವಿನ ಸಂವಹನ ವ್ಯವಸ್ಥೆ ಸುಧಾರಿಸುವಂತೆ ಸಲಹೆ ಮಾಡಲಾಗಿದೆ. ತಕ್ಷಣಕ್ಕೆ ಪರಿಹರಿಸಬೇಕಾದ ಒಟ್ಟು 28 ಹೊಸ ಸಮಸ್ಯೆಗಳನ್ನು ಕೂಡಾ ವರದಿಯಲ್ಲಿ ಪಟ್ಟಿ ಮಾಡಲಾಗಿದೆ. ಈ ಹಿಂದಿನ ವರದಿಯಲ್ಲಿ ಎಡಿಬಿ ಒಟ್ಟು ಇಂಥ 50 ಸಮಸ್ಯೆಗಳನ್ನು ಪಟ್ಟಿ ಮಾಡಿದ್ದು, ಇದೀಗ ಭಾರತದ ಸೇನೆಗಳು ತಮ್ಮ ಗರಿಷ್ಠ ಸಾಮರ್ಥ್ಯವನ್ನು ಪ್ರದರ್ಶಿಸಬೇಕಾದರೆ ಸೇನಾ ವ್ಯವಸ್ಥೆಯಲ್ಲಿರುವ ಒಟ್ಟು 78 ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕಾಗುತ್ತದೆ.

72 ಪುಟಗಳ ಈ ವರದಿಯನ್ನು ಶುಕ್ರವಾರ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ಬಿಡುಗಡೆ ಮಾಡಿದ್ದಾರೆ. "ವಿಶೇಷ ಪಡೆ ತಂಡಗಳು ವಿರೋಧಿ ಪ್ರದೇಶದ ಗಡಿಗೊಳಗೆ ನುಸುಳುವುದು, ವಿರೋಧಿ ಪ್ರದೇಶದ ಪಥದರ್ಶಕ ತಂಡಗಳ ನಿಯೋಜನೆ, ಸಾವು ನೋವುಗಳ ಸಂದರ್ಭದಲ್ಲಿ ತೆರವು ಕಾರ್ಯಾಚರಣೆಯಂಥ ಅಂಶಗಳಲ್ಲಿ ಪೈಲಟ್‌ಗಳು ತಮ್ಮದೇ ಸೇನೆಯ ನಿಖರವಾದ ಪ್ರದೇಶಗಳ ಬಗ್ಗೆ ಅರಿವು ಹೊಂದಿರಬೇಕಾದ್ದು ಅಗತ್ಯ" ಎಂದು ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X